7

ಕಮಲ ಅರಳಿಸಲು ಪ್ರಾಮಾಣಿಕವಾಗಿ ಶ್ರಮಿಸಿ

Published:
Updated:

ಗೌರಿಬಿದನೂರು: ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದಕ್ಷ ಆಡಳಿತ ಮೆಚ್ಚಿರುವ ಜನರು ರಾಜ್ಯದಲ್ಲಿಯೂ ಕಮಲ ಅರಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಶಿವ ಪ್ರತಾಪ ಶುಕ್ಲಾ ಹೇಳಿದರು.

ಪಟ್ಟಣದ ನದಿದಡ ಆಂಜನೇಯ ಸ್ವಾಮಿ ದೇವಾಲಯದ ಬಳಿ ಬಿಜೆಪಿ ಪಕ್ಷದ ವತಿಯಿಂದ ಆಯೋಜಿಸಿದ್ದ ಪದಾಧಿಕಾರಿಗಳ ವಿಶೇಷ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಮಿಷನ್ ಸರ್ಕಾರಕ್ಕೆ ಮುಕ್ತಿ ಕಾಣಿಸಬೇಕು. ಆ ಮೂಲಕ ಕಾಂಗ್ರೆಸ್ ಮುಕ್ತ ರಾಜ್ಯದ ಕನಸು ನನಸು ಮಾಡುವ ಗುರಿ ನಮ್ಮೆಲ್ಲರದಾಗಬೇಕು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮುದ್ರಾ, ಜನಧನ ಯೋಜನೆ ಸೇರಿದಂತೆ ಜನಪರ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕು ಎಂದು ತಿಳಿಸಿದರು.

ಯಲಹಂಕ ವಿಧಾನಸಭಾ ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ರಾಜ್ಯ ಮತ್ತು ರಾಷ್ಟ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರವನ್ನು ಆಡಳಿತಕ್ಕೆ ತರುವುದೇ ನಮ್ಮೆಲ್ಲರ ಧ್ಯೇಯವಾಗಬೇಕು. ಬೂತ್ ಮಟ್ಟದಿಂದ ಬಿಜೆಪಿ ಪಕ್ಷವನ್ನು ಬಲಿಷ್ಠಪಡಿಸುವ ನಿಟ್ಟಿನಲ್ಲಿ ಪಕ್ಷದ ಎಲ್ಲಾ ಪದಾಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ಒಮ್ಮತದಿಂದ ಶ್ರಮಿಸಿ ಕಾಂಗ್ರೆಸ್‌ನ್ನು ಪತನಗೊಳಿಸಿ ಬಿಜೆಪಿ ಪತಾಕೆ ಹಾರಿಸಬೇಕಾಗಿದೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಜಿ.ವಿ.ಮಂಜುನಾಥ, ಪಕ್ಷದ ವಿಸ್ತಾರಕರಾದ ಕೃಷ್ಣಾರೆಡ್ಡಿ, ನರಸಿಂಹರೆಡ್ಡಿ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಕಾಂತರಾಜು, ವೆಂಕಟೇಶ್, ನಂದಕುಮಾರ್ ರೆಡ್ಡಿ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಆರ್.ಪಿ.ಗೋಪಿನಾಥ್, ಮುಖಂಡರಾದ ಎನ್.ಎಂ.ರವಿನಾರಾಯಣರೆಡ್ಡಿ, ಕೆ.ಜೈಪಾಲರೆಡ್ಡಿ, ಎಂ.ವರಪ್ರಸಾದರೆಡ್ಡಿ, ಎನ್.ಜ್ಯೋತಿರೆಡ್ಡಿ, ಎಚ್.ವಿ.ಶಿವಶಂಕರ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry