ದೆಹಲಿಯಲ್ಲಿ ಬಿಜೆಪಿಯ ಸೂರಜ್ ನಾಯ್ಕ ಬಂಧನ

7

ದೆಹಲಿಯಲ್ಲಿ ಬಿಜೆಪಿಯ ಸೂರಜ್ ನಾಯ್ಕ ಬಂಧನ

Published:
Updated:

ಹೊನ್ನಾವರ: ಅಕ್ರಮ ಗೋ ಸಾಗಣೆ ಆರೋಪದ ಮೇಲೆ ಇಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಬಿಜೆಪಿ ಮುಖಂಡ ಸೂರಜ್ ನಾಯ್ಕ ಸೋನಿ ಅವರನ್ನು ಪೊಲೀಸರು ಗುರುವಾರ ರಾತ್ರಿ ದೆಹಲಿಯಲ್ಲಿ ಬಂಧಿಸಿದ್ದಾರೆ.

‘ಕರ್ನಾಟಕ ಮತ್ತು ದೆಹಲಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಿಜಾಮುದ್ದೀನ್ ರೈಲು ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಅವರನ್ನು ಇಲ್ಲಿನ ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆ ತರಲಾಗುತ್ತಿದ್ದು, ಶನಿವಾರ ಬೆಳಿಗ್ಗೆ ತಲುಪುವ ನಿರೀಕ್ಷೆ ಇದೆ’ ಎಂದು ಇಲ್ಲಿಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್ ಸೇರಿದಂತೆ 150ಕ್ಕೂ ಹೆಚ್ಚು ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಸೂರಜ್ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ತಹಶೀಲ್ದಾರ್ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry