ಇಂದಿರಾ ಕ್ಯಾಂಟೀನ್‍ಗೆ ಡಿ.ಸಿ ಭೇಟಿ: ಪರಿಶೀಲನೆ

7

ಇಂದಿರಾ ಕ್ಯಾಂಟೀನ್‍ಗೆ ಡಿ.ಸಿ ಭೇಟಿ: ಪರಿಶೀಲನೆ

Published:
Updated:
ಇಂದಿರಾ ಕ್ಯಾಂಟೀನ್‍ಗೆ ಡಿ.ಸಿ ಭೇಟಿ: ಪರಿಶೀಲನೆ

ಮಂಡ್ಯ: ನಗರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ಆರಂಭಗೊಂಡಿರುವ ಇಂದಿರಾ ಕ್ಯಾಂಟೀನ್‌ಗೆ ಜಿಲ್ಲಾಧಿಕಾರಿ ಎನ್‌.ಮಂಜುಶ್ರೀ ದಿಢೀರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಡಿಮೆ ಆಹಾರ ಸರಬರಾಜು ಮಾಡಲಾಗುತ್ತಿದೆ ಎಂದು ಸಾರ್ವಜನಿಕ ರಿಂದ ದೂರುಬಂದ ಕಾರಣ ಜಿಲ್ಲಾಧಿಕಾರಿಗಳು ದೀಢೀರ್‌ ಭೇಟಿ ನೀಡಿದರು. ಇಂದಿರಾ ಕ್ಯಾಂಟೀನ್‍ನಲ್ಲಿ ತಯಾರಿಸಲಾದ ಉಪಾಹಾರವನ್ನು ಅವರು ಈ ಸಂದರ್ಭದಲ್ಲಿ ಸೇವಿಸಿದರು.

ಬಡವರಿಗೆಕೈ ಗೆಟಕುವ ದರದಲ್ಲಿ ಬೆಳಗಿನ ಉಪಾಹಾರ, ಮಧ್ಯಾಹ್ನ ಹಾಗೂ ರಾತ್ರಿ ಊಟದ ಸೌಲಭ್ಯ ಕಲ್ಪಿಸಲಾಗಿದೆ. ಇದನ್ನು ಜನರು ಸದುಪಯೋಗ ಮಾಡಿಕೊಳ್ಳಬೇಕು. ಯಾವುದೇ ದೂರುಗಳಿಗೆ ಅವಕಾಶ ನೀಡದೆ ಸಿಬ್ಬಂದಿ ಕಾರ್ಯ ನಿರ್ವಹಣೆ ಮಾಡಬೇಕು. ಜೊತೆಗೆ ಸಿಬ್ಬಂದಿ ಕ್ಯಾಂಟೀನ್‌ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.

ನಗರಸಭೆ ಎಂಜಿನಿಯರ್‌ ಪ್ರತಾಪ್ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry