ಮಹಿಳೆಯರು ಆತ್ಮಸ್ಥೈರ್ಯ ಬೆಳೆಸಿಕೊಳ್ಳಲು ಸಲಹೆ

7

ಮಹಿಳೆಯರು ಆತ್ಮಸ್ಥೈರ್ಯ ಬೆಳೆಸಿಕೊಳ್ಳಲು ಸಲಹೆ

Published:
Updated:

ಚಿಕ್ಕಮಗಳೂರು: ಶಿಕ್ಷಣದಿಂದ ಮಾತ್ರ ಮಹಿಳೆಯರು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಪ್ರಭಾವತಿ ಎಂ. ಹಿರೇಮಠ ಅಭಿಪ್ರಾಯಪಟ್ಟರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸ್ನೇಹ ಮಿಲನ ಮಹಿಳಾ ಸಂಘದ ಸಹಯೋಗದಲ್ಲಿ ನಗರದ ವಿವೇಕಾನಂದ ಉದ್ಯಾನದಲ್ಲಿ ಈಚೆಗೆ ಏರ್ಪಡಿಸಿದ್ದ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಮಹಿಳೆಯರು ಆತ್ಮಸ್ಥೈರ್ಯ ಬೆಳಸಿಕೊಳ್ಳಬೇಕು. ಆರ್ಥಿಕ ಸ್ವಾವಲಂಬಿಯಾಗಬೇಕು. ಉನ್ನತ ಸ್ಥಾನ ಅಲಂಕರಿಸಬೇಕು. 12ನೇ ಶತಮಾನದಲ್ಲಿ ಮಹಿಳೆಯರ ಸಮಾನತೆಗೆ ಶರಣೆ ಅಕ್ಕಮಹಾದೇವಿ ವಚನ ಸಾಹಿತ್ಯದ ಮೂಲಕ ಹೋರಾಟ ನಡೆಸಿದರು. ಅವರು ಆಧ್ಯಾತ್ಮಿಕ ಮಾರ್ಗದರ್ಶಿಯಾಗಿದ್ದರು ಎಂದು ಹೇಳಿದರು.

ವಕೀಲರಾದ ಬಿ.ಎಂ.ಲಕ್ಷ್ಮಣಗೌಡ, ಡಿಎಸ್ಮಮತಾ, ಜಿಲ್ಲಾ ಗ್ರಾಹಕರ ವೇದಿಕೆ ನಿವೃತ್ತ ಸದಸ್ಯ ಎಚ್.ಎಸ್. ರುದ್ರಪ್ಪ ಅವರು ಉಪನ್ಯಾಸ ನೀಡಿದರು.

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಎನ್.ಹೆಗ್ಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಅಣ್ಣಾಮಲೈ, ಸ್ನೇಹ ಮಿಲನ ಮಹಿಳಾ ಸಂಘದ ಅಧ್ಯಕ್ಷೆ ಸಿ.ಎಸ್. ಪುಷ್ಪಾರಾಜೇಂದ್ರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಬಿ.ಟಿ. ದುಶ್ಯಂತ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry