ಜಿಲ್ಲಾ ವಿಭಜನೆ: ಸಭೆ

7

ಜಿಲ್ಲಾ ವಿಭಜನೆ: ಸಭೆ

Published:
Updated:

ಬೆಂಗಳೂರು: ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಒಂದು ಅಥವಾ ಎರಡು ಹೊಸ ಜಿಲ್ಲೆಗಳನ್ನು ಸೃಷ್ಟಿಸುವ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ (ಮಾ.19) ಸಭೆ ಕರೆದಿದ್ದಾರೆ.

ಮಧ್ಯಾಹ್ನದ ಒಂದು ಗಂಟೆ ವಿಧಾನಸೌಧದಲ್ಲಿ ನಡೆಯಲಿರುವ ಸಭೆಗೆ ಬೆಳಗಾವಿ ಜಿಲ್ಲೆ ಪ್ರತಿನಿಧಿಸುವ ಲೋಕಸಭೆ, ರಾಜ್ಯಸಭೆ, ವಿಧಾನ ಸಭೆ ಹಾಗೂ ವಿಧಾನಪರಿಷತ್ತಿನ ಸದಸ್ಯರನ್ನು ಆಮಂತ್ರಣ ನೀಡಲಾಗಿದೆ.

ಎರಡು ಲೋಕಸಭಾ ಕ್ಷೇತ್ರ, 18 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಬೇಕು ಎಂಬ ಬೇಡಿಕೆ ದಶಕಗಳಿಂದ ಇದೆ. ಚಿಕ್ಕೋಡಿ ಜಿಲ್ಲಾ ಕೇಂದ್ರವಾಗಿ ಹೊಸ ಜಿಲ್ಲೆ ಘೋಷಿಸಬೇಕು ಎಂಬ ಹಕ್ಕೊತ್ತಾಯ ವ್ಯಕ್ತವಾಗಿತ್ತು. ಇತ್ತೀಚೆಗೆ ಚಿಕ್ಕೋಡಿ ಜತೆಗೆ ಗೋಕಾಕ ಜಿಲ್ಲೆ ಘೋಷಣೆ ಮಾಡಬೇಕು ಎಂಬ ಆಗ್ರಹವೂ ಮೂಡಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry