ಲೈಂಗಿಕ ಅಲ್ಪಸಂಖ್ಯಾತರ ಬಗ್ಗೆ ನಿರ್ಲಕ್ಷ್ಯ ಮಾನವ ಹಕ್ಕು ಆಯೋಗಕ್ಕೆ ದೂರು

7

ಲೈಂಗಿಕ ಅಲ್ಪಸಂಖ್ಯಾತರ ಬಗ್ಗೆ ನಿರ್ಲಕ್ಷ್ಯ ಮಾನವ ಹಕ್ಕು ಆಯೋಗಕ್ಕೆ ದೂರು

Published:
Updated:

ಬೆಂಗಳೂರು: ಲೈಂಗಿಕ ಅಲ್ಪಸಂಖ್ಯಾತರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಅವಕಾಶ ಸೇರಿದಂತೆ ಸಂವಿಧಾನಬದ್ಧವಾದ ಮೂಲಭೂತ ಹಕ್ಕು ಕೊಡಬೇಕೆಂದು ಸುಪ್ರೀಂ ಕೋರ್ಟ್‌ ಆದೇಶಿಸಿದ್ದರೂ ರಾಜ್ಯ ಸರ್ಕಾರ ಮಾರ್ಗಸೂಚಿ ರೂಪಿಸಿಲ್ಲ ಎಂದು ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಕಾನೂನು ಸಂಶೋಧನಾ ಮತ್ತು ಅಧ್ಯಯನ ಸಂಸ್ಥೆ ಮಾನವ ಹಕ್ಕು ಆಯೋಗದಲ್ಲಿ ದೂರು ದಾಖಲಿಸಿದೆ.

ಲೈಂಗಿಕ ಅಲ್ಪಸಂಖ್ಯಾತರನ್ನು ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರೆಂದು ಪರಿಗಣಿಸಿ ಎಲ್ಲ ಸವಲತ್ತುಗಳನ್ನು ಕೊಡುವಂತೆ  ಕೋರ್ಟ್ 2014ರಲ್ಲೆ ಆದೇಶ ನೀಡಿದೆ.

ತೀರ್ಪು ಹೊರಬಂದು ನಾಲ್ಕು ವರ್ಷ ಕಳೆದರೂ ಸರ್ಕಾರ ನಿಯಮಾವಳಿ ರೂಪಿಸದಿರುವುದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಎಂದು ಸಂಸ್ಥೆಯ ಅಧ್ಯಕ್ಷ ಅ.ಮ. ಭಾಸ್ಕರ್ ದೂರಿದ್ದಾರೆ.

ಸರ್ಕಾರದ ಈ ನಿರ್ಲಕ್ಷ್ಯದ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಬೇಕು. ಕೂಡಲೇ ಅಗತ್ಯ ಮಾರ್ಗಸೂಚಿ ರೂಪಿಸುವಂತೆ ನಿರ್ದೇಶನ ನೀಡಬೇಕು ಎಂದು ಅವರು ಆಯೋಗಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry