ಗೋವಾ ನಾಯಕತ್ವ ಬದಲಿಲ್ಲ: ಬಿಜೆಪಿ

7

ಗೋವಾ ನಾಯಕತ್ವ ಬದಲಿಲ್ಲ: ಬಿಜೆಪಿ

Published:
Updated:

ಪಣಜಿ: ಅನಾರೋಗ್ಯದ ಕಾರಣ ಚಿಕಿತ್ಸೆ ಪಡೆಯುತ್ತಿರುವ ಮನೋಹರ್ ಪರ‍್ರೀಕರ್ ಅವರನ್ನು ಗೋವಾ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸುವುದಿಲ್ಲ ಎಂದು ಗೋವಾ ಬಿಜೆಪಿ ಸ್ಪಷ್ಟಪಡಿಸಿದೆ.

ಮುಖ್ಯಮಂತ್ರಿ ಹುದ್ದೆಯನ್ನು ಬಿಜೆಪಿಯಲ್ಲೇ ಇತರರಿಗೆ ನೀಡಲಾಗುತ್ತದೆ ಮತ್ತು ಆ ಹುದ್ದೆಯನ್ನು ಮಿತ್ರಪಕ್ಷವೊಂದಕ್ಕೆ ಬಿಟ್ಟುಕೊಡಲಾಗುತ್ತದೆ ಎಂಬ ಸುದ್ದಿಗಳು ಹರಡಿದ್ದವು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ನೇತೃತ್ವದಲ್ಲಿ ಸಭೆ ನಡೆಸಿದ ಪಕ್ಷದ ನಾಯಕರು, ಅಂತಹ ಯಾವುದೇ ಬದಲಾವಣೆ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.

‘ಮುಖ್ಯಮಂತ್ರಿ ಹುದ್ದೆಯನ್ನು ಮಿತ್ರಪಕ್ಷಗಳಿಗೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಪರ‍್ರೀಕರ್ ಅವರ ಆರೋಗ್ಯ ಸುಧಾರಿಸುತ್ತಿದೆ. ಶೀಘ್ರವೇ ಅವರು ವಾಪಸಾಗಿ, ಸರ್ಕಾರವನ್ನು ಮುನ್ನಡೆಸಲಿದ್ದಾರೆ’ ಎಂದು ಗೋವಾ ಬಿಜೆಪಿ ಸಂಸದ ಶ್ರೀಪಾದ್ ನಾಯಕ್ ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry