ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ

7
ಜೆ.ಪಿ.ನಗರ ಠಾಣೆಗೆ ಸಂತ್ರಸ್ತೆ ದೂರು : ಆರೋಪಿ ಸೆರೆ

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ

Published:
Updated:

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ 24 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಪವನ್ (30) ಎಂಬಾತನನ್ನು ಜೆ.ಪಿ.ನಗರ ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತೆ ಹೊರರಾಜ್ಯದ ಯುವತಿ. ಕೆಲಸ ಹುಡುಕಿಕೊಂಡು ಕೆಲ ತಿಂಗಳ ಹಿಂದಷ್ಟೇ ನಗರಕ್ಕೆ ಬಂದಿದ್ದರು. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.

ಆರೋಪಿ ಪವನ್, ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ ಆ ಯುವತಿಗೆ ಪರಿಚಯವಾಗಿದ್ದ. ಅವರಿಬ್ಬರು ಫೇಸ್‌ಬುಕ್‌ನಲ್ಲಿ ಚಾಟಿಂಗ್ ಮಾಡುತ್ತಿದ್ದರು. ಕ್ರಮೇಣ ಇಬ್ಬರ ನಡುವೆ ಸಲುಗೆ ಬೆಳೆದಿತ್ತು. ತಮ್ಮ ಮೊಬೈಲ್ ನಂಬರ್‌ಗಳನ್ನೂ ವಿನಿಮಯ ಮಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದರು.

‘ಮದುವೆಯಾಗುವುದಾಗಿ ನಂಬಿಸಿದ್ದ ಆರೋಪಿ, ಆ ವಿಚಾರವಾಗಿ ಚರ್ಚಿಸುವ ನೆಪದಲ್ಲಿ ಮನೆಯೊಂದಕ್ಕೆ ಯುವತಿಯನ್ನು ಕರೆಸಿಕೊಂಡು ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಮದುವೆಯಾಗಲು ನಿರಾಕರಿಸಿ ಯುವತಿಯಿಂದ ದೂರ ಉಳಿಯಲು ಯತ್ನಿಸಿದ್ದ.’

ಮದುವೆಯಾಗುವಂತೆ ಆ ಯುವತಿ ಪಟ್ಟು ಹಿಡಿದಿದ್ದರಿಂದ ಮತ್ತೊಮ್ಮೆ ಮನೆಗೆ ಕರೆಸಿಕೊಂಡಿದ್ದ. ಒಂದು ವಾರಗಳ ಕಾಲ ಕೊಠಡಿಯೊಂದರಲ್ಲಿ ಕೂಡಿ ಹಾಕಿ ಹಿಂಸೆ ನೀಡಿದ್ದ. ಅಲ್ಲಿಂದ ತಪ್ಪಿಸಿಕೊಂಡು ಹೊರ ಬಂದ ಯುವತಿ ಠಾಣೆಗೆ ದೂರು ಕೊಟ್ಟಿದ್ದಾರೆ. ಅದರನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry