ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಟ್ಟ ಮಾತು ತಪ್ಪಿದ ಮುಖ್ಯಮಂತ್ರಿ ಸಿದ್ದರಾಮಯ್ಯ: ರಂಭಾಪುರಿ ಶ್ರೀ ಆರೋಪ

Last Updated 19 ಮಾರ್ಚ್ 2018, 10:16 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಮಾನ್ಯತೆ ನೀಡುವ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಟ್ಟ ಮಾತಿಗೆ ತಪ್ಪಿದ್ದಾರೆ ಎಂದು ಬಾಳೆಹೊನ್ನೂರಿನ ರಂಭಾಪುರಿ ಶ್ರೀ ಆರೋಪಿಸಿದರು.

ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಸಂಬಂಧಿಸಿ ನ್ಯಾಯಮೂರ್ತಿ ನಾಗಮೋಹನ್‌ ದಾಸ್ ಸಮಿತಿ ಸಲ್ಲಿಸಿದ್ದ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿದ ಬೆನ್ನಲ್ಲೇ ರಂಭಾಪುರಿ ಶ್ರೀ ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದಾರೆ.

‘ಸಿದ್ದರಾಮಯ್ಯ ಅವರಿಗೆ ಈಗ ಅಧಿಕಾರ ಇದೆ. ಬೇಕೆನಿಸಿದ್ದನ್ನು ಮಾಡಲಿ. ಅವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ’ ಎಂದು ಅವರು ಹೇಳಿದರು.

‘ತಜ್ಞರ ಸಮಿತಿಯ ಮಾತು ಕೇಳಿಕೊಂಡು ಮುಖ್ಯಮಂತ್ರಿಗಳು ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ’ ಎಂದು ಅವರು ಆರೋಪಿಸಿದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT