ಕಾವೇರಿ: ಕೇಂದ್ರದ ಮೇಲೆ ಒತ್ತಡಕ್ಕೆ ಡಿಎಂಕೆ ಒತ್ತಾಯ

7

ಕಾವೇರಿ: ಕೇಂದ್ರದ ಮೇಲೆ ಒತ್ತಡಕ್ಕೆ ಡಿಎಂಕೆ ಒತ್ತಾಯ

Published:
Updated:
ಕಾವೇರಿ: ಕೇಂದ್ರದ ಮೇಲೆ ಒತ್ತಡಕ್ಕೆ ಡಿಎಂಕೆ ಒತ್ತಾಯ

ಚೆನ್ನೈ: ತಮಿಳುನಾಡು ವಿಧಾನಸಭೆ ಕಲಾಪದಲ್ಲಿ ಕಾವೇರಿ ನೀರು ಹಂಚಿಕೆ ವಿವಾದದ ಬಗ್ಗೆ ಸೋಮವಾರ ಚರ್ಚೆ ನಡೆದಿದೆ.

‘ಕೇಂದ್ರ ಸರ್ಕಾರದ ವಿರುದ್ಧ ಮಂಡಿಸಲಾಗಿರುವ ಅವಿಶ್ವಾಸ ಗೊತ್ತುವಳಿಗೆ ಎಐಎಡಿಎಂಕೆ ಬೆಂಬಲ ಸೂಚಿಸಬೇಕು. ಆ ಮೂಲಕ ಕೇಂದ್ರದ ಮೇಲೆ ಒತ್ತಡ ಹೇರಬೇಕು’ ಎಂದು ವಿರೋಧ ಪಕ್ಷ ಡಿಎಂಕೆ ಒತ್ತಾಯಿಸಿದೆ. ಆದರೆ ಇದೇ 29ರವರೆಗೆ ಕಾಯ್ದು ನೋಡಲಾಗುವುದು ಎಂದು ಸರ್ಕಾರ ಪ್ರತಿಕ್ರಿಯೆ ನೀಡಿದೆ.

‘ಇನ್ನೂ ಸಮಯ ಇದೆ. ಹಾಗಾಗಿ ನಾವು ತಾಳ್ಮೆಯಿಂದ ಇರಬೇಕು’ ಎಂದು ಉಪ ಮುಖ್ಯಮಂತ್ರಿ ಒ. ಪನ್ನೀರಸ್ವೆಲಂ ಹೇಳಿದ್ದಾರೆ.

ಕಾವೇರಿ ನೀರು ಹಂಚಿಕೆ ವಿವಾದ ಪರಿಹಾರ ನ್ಯಾಯಮಂಡಳಿಯ ಆದೇಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ಸುಪ್ರೀಂ ಕೋರ್ಟ್‌ ಫೆಬ್ರುವರಿ 16ರಂದು ತೀರ್ಪು ನೀಡಿತ್ತು. ತೀರ್ಪಿನಲ್ಲಿ ಸೂಚಿಸಿರುವ ಅಂಶಗಳ ಜಾರಿಗೆ ಯೋಜನೆ ರೂಪಿಸಲು ಕೇಂದ್ರ ಸರ್ಕಾರಕ್ಕೆ ಆರು ವಾರಗಳ ಅವಕಾಶ ಕೊಟ್ಟಿತ್ತು.

ಕಾವೇರಿ ನೀರು ನಿರ್ವಹಣಾ ಮಂಡಳಿ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಯನ್ನು ಸ್ಥಾಪಿಸಬೇಕು ಎಂದು ತಮಿಳುನಾಡು ಸರ್ಕಾರವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದೆ.

ಎಲ್ಲ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಕಾವೇರಿ ವಿವಾದಕ್ಕೆ ಸಂಬಂಧಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು. ಎಐಎಡಿಎಂಕೆ ಸಂಸದರು ಒಂದು ವಾರದಿಂದ ಕಾವೇರಿ ವಿಚಾರಕ್ಕೆ ಸಂಬಂಧಿಸಿ ಸಂಸತ್ತಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು.

ಕೇಂದ್ರದ ವಿರುದ್ಧದ ಅವಿಶ್ವಾಸ ಗೊತ್ತುವಳಿ ಮತ್ತು ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಎರಡು ಪ್ರತ್ಯೇಕ ವಿಚಾರಗಳು. ಅದನ್ನು ಒಂದರೊಳಗೊಂದು ಸೇರಿಸಿ ಗೊಂದಲ ಸೃಷ್ಟಿಸುವುದು ಬೇಡ ಎಂದು ಪನ್ನೀರಸೆಲ್ವಂ ಅಭಿಪ್ರಾಯಪಟ್ಟರು.

ಕಾವೇರಿ ನೀರು ನಿರ್ವಹಣಾ ಮಂಡಳಿ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಯನ್ನು ಸ್ಥಾಪಿಸಬೇಕು ಎಂದು ತಮಿಳುನಾಡು ಸರ್ಕಾರವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry