ವಿದ್ಯಾಥಿಗಳಿಗೆ ಥಳಿಸಿದ ವಾರ್ಡನ್‌ಗಳ ಬಂಧನ

7

ವಿದ್ಯಾಥಿಗಳಿಗೆ ಥಳಿಸಿದ ವಾರ್ಡನ್‌ಗಳ ಬಂಧನ

Published:
Updated:

ಮೂಡುಬಿದಿರೆ: ದ್ವಿತೀಯ ಪಿಯುಸಿ ಪರೀಕ್ಷೆ ಮುಗಿದ ಖುಷಿಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ವಿದ್ಯಾರ್ಥಿಗಳಿಗೆ ಥಳಿಸಿದ ಆರೋಪದಲ್ಲಿ ಇಲ್ಲಿನ ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಹಾಸ್ಟೆಲ್‌ನ ಮೂವರು ವಾರ್ಡನ್‌ಗಳನ್ನು ಪೊಲೀಸರು ಬಂಧಿಸಿದ್ದಾರೆ.

ಖಾದರ್ ಕೆ., ರಾಜೇಶ್ ಮತ್ತು ನಾಗೇಶ್ ಬಂಧಿತರು. ಹಲ್ಲೆಗೊಳಗಾದ ವಿದ್ಯಾರ್ಥಿ ಪ್ರಜ್ವಲ್ ರಾವ್ ನೀಡಿದ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಆರೋಪಿಗಳಿಗೆ ಸೋಮವಾರ ಮೂಡುಬಿದಿರೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

‘ಶನಿವಾರ ರಾತ್ರಿ ಆಳ್ವಾಸ್‌ನ ಪುಷ್ಪಗಿರಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು ಕಾಲೇಜು ನಿಯಮವನ್ನು ಉಲ್ಲಂಘಿಸಿ ಪಟಾಕಿ ಸಿಡಿಸಿ, ಕೇಕೆ ಹಾಕಿ ಸಂಭ್ರಮಿಸಿ ಅಶಿಸ್ತಿನಿಂದ ವರ್ತಿಸಿದ್ದಾರೆ, ಇದನ್ನು ಪ್ರಶ್ನಿಸಿದ ವಾರ್ಡನ್‌ಗಳನ್ನು ವಿದ್ಯಾರ್ಥಿಗಳು ಬೆದರಿಸಿದ್ದರು. ಅಲ್ಲಿಂದ ಕ್ಯಾಂಟೀನ್‌ಗೆ ತೆರಳಿದ ವಿದ್ಯಾರ್ಥಿಗಳು ಊಟ ಸರಿ ಇಲ್ಲ ಎಂದು ಅಲ್ಲಿನ ಸಿಬ್ಬಂದಿ ಜತೆ ವಾಗ್ವಾದ ನಡೆಸಿದ್ದರು. ಅಶಿಸ್ತಿನಿಂದ ವರ್ತಿಸಿದ ಕೆಲವು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವಾರ್ಡನ್‌ಗಳು ಬೆತ್ತದಲ್ಲಿ ಥಳಿಸಿದ್ದಾರೆ’ ಎಂದು ಪ್ರಕರಣದ ಬಗ್ಗೆ ಮೂಡುಬಿದಿರೆ ಪೊಲೀಸರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry