ಹಲ್ಲೆ: ಭಾರತದ ಮಹಿಳೆ ದೂರು

7

ಹಲ್ಲೆ: ಭಾರತದ ಮಹಿಳೆ ದೂರು

Published:
Updated:

ದುಬೈ: ಮನೆಯ ಮಾಲೀಕ ದೈಹಿಕವಾಗಿ ಬಳಸಿಕೊಂಡಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ಮಾಡಿದ್ದಾರೆ ಎಂದು ಕುವೈತ್‌ನಲ್ಲಿ ಮನೆ ಕೆಲಸ ಮಾಡುತ್ತಿದ್ದ ಭಾರತದ ಮಹಿಳೆ ಉದ್ಯೋಗದಾತನ ವಿರುದ್ಧ ದೂರು ನೀಡಿದ್ದಾರೆ.

ಮಹಿಳೆ ತಲೆಗೆ ತೀವ್ರ ಗಾಯವಾಗಿದ್ದು, ಕೈ ಮೇಲೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾಗಿ ‘ಟೈಮ್ಸ್‌ ಕುವೈತ್‌’ ವರದಿ ಮಾಡಿದೆ. ಮಹಿಳೆಯ ಗುರುತು ಇನ್ನೂ ಪತ್ತೆಯಾಗಿಲ್ಲ. ಆಕೆಯ ಸಹೋದರಿ ರಕ್ಷಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುವೈತ್‌ನಲ್ಲಿ ಕೆಲಸ ಮಾಡುತ್ತಿರುವ ಆಕೆಯ ಸಹೋದರ ಪೊಲೀಸರಿಗೆ ದೂರು ನೀಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry