ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇರ ತೆರಿಗೆ ಸಂಗ್ರಹ ಪ್ರಮಾಣ ಏರಿಕೆ

Last Updated 19 ಮಾರ್ಚ್ 2018, 19:57 IST
ಅಕ್ಷರ ಗಾತ್ರ

ನವದೆಹಲಿ: ಪ್ರಸಕ್ತ ಆರ್ಥಿಕ ವರ್ಷದ ಏಪ್ರಿಲ್‌–ಫೆಬ್ರುವರಿ ತಿಂಗಳ ಅವಧಿಯಲ್ಲಿ ನೇರ ತೆರಿಗೆ ಸಂಗ್ರಹ ಪ್ರಮಾಣ ಶೇ 19.5ರಷ್ಟು ಏರಿಕೆಯಾಗಿದೆ.

ಕಾರ್ಪೊರೇಟ್ ತೆರಿಗೆ ಪ್ರಮಾಣ ಹೆಚ್ಚಾಗಿದ್ದರಿಂದ ಒಟ್ಟು ₹ 7.44 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿದೆ.

ಈ ಹಣಕಾಸು ವರ್ಷದಲ್ಲಿ ₹10.5ಲಕ್ಷ ಕೋಟಿ ತೆರಿಗೆ ಸಂಗ್ರಹಿಸಲು ಬಜೆಟ್‌ನಲ್ಲಿ ಗುರಿ ನಿಗದಿ ಮಾಡಲಾಗಿತ್ತು.

ನೇರ ತೆರಿಗೆ ಸಂಗ್ರಹ ಪ್ರಮಾಣದ, ಇದುವರೆಗಿನ ತಾತ್ಕಾಲಿಕ ಅಂಕಿಅಂಶಗಳನ್ನು ಗಮನಿಸಿದರೆ, ಕಳೆದ ವರ್ಷಕ್ಕಿಂತ ಶೇ 19.5ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.

ಈ ಆರ್ಥಿಕ ವರ್ಷದ 11 ತಿಂಗಳ ಅವಧಿಯಲ್ಲಿ ಮರುಪಾವತಿಗೆ ಹೊಂದಾಣಿಕೆ ಮಾಡುವುದಕ್ಕಿಂತ ಮುಂಚಿನ ಒಟ್ಟು ತೆರಿಗೆ ಸಂಗ್ರಹ ಪ್ರಮಾಣ ಶೇ 14.5ರಷ್ಟು ಏರಿಕೆಯಾಗಿದೆ. ₹ 8.83 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿದೆ.

ಫೆಬ್ರುವರಿ ಅಂತ್ಯದ ವೇಳೆ ₹1.39 ಲಕ್ಷ ಕೋಟಿ ತೆರಿಗೆ ಮರುಪಾವತಿಸಲಾಗಿದೆ.

ಕಾರ್ಪೊರೇಟ್‌ ತೆರಿಗೆ ಸಂಗ್ರಹ ಶೇ 19.7 ರಷ್ಟು ಮತ್ತು ವೈಯಕ್ತಿಕ ಆದಾಯ ತೆರಿಗೆ ಸಂಗ್ರಹ ಶೇ 18.6 ರಷ್ಟು ವೃದ್ಧಿ ಕಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT