ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

7

ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

Published:
Updated:

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ತಾಲ್ಲೂಕಿನ ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಅನ್ನಪೂರ್ಣೇಶ್ವರಿ ಟ್ರಸ್ಟ್ ವತಿಯಿಂದ ಇಲ್ಲಿನ ಚಿಕ್ಕರಾಯಪ್ಪನಹಳ್ಳಿ ಯಲ್ಲಿ ಭಾನುವಾರ ‘ಶುದ್ಧ ಕುಡಿಯುವ ನೀರಿನ ಘಟಕ’ ಉದ್ಘಾಟಿಸಿಲಾಯಿತು.

ಉದ್ಘಾಟಿಸಿ ಮಾತನಾಡಿದ ಶ್ರೀ ಸತ್ಯಸಾಯಿ ಅನ್ನಪೂರ್ಣೇಶ್ವರಿ ಟ್ರಸ್ಟ್‌ನ ಟ್ರಸ್ಟಿ ಕುಸುಮಾ, ಪ್ರಸ್ತುತ ಟ್ರಸ್ಟ್ ಶೈಕ್ಷಣಿಕ ಸೇವೆಯೊಂದಿಗೆ ಗ್ರಾಮೀಣ ಪ್ರದೇಶದ ಬೇಕು ಬೇಡಗಳನ್ನು ಅರಿತು ಕಾರ್ಯ ನಿರ್ವಹಿಸುತ್ತಿದೆ. ಶುದ್ಧ ನೀರಿನ ಘಟಕಗಳು ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ನೀಡುತ್ತಾ ಸೇವಾ ಕಾರ್ಯವನ್ನು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ವಿಸ್ತರಿಸಿದೆ ಎಂದು ಅವರು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಅಪ್ಪಯಣ್ಣ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮಾನತೆ ಸಾಧಿಸಲು ಶ್ರೀ ಸತ್ಯಸಾಯಿ ಟ್ರಸ್ಟ್ ಸೇವಾ ಕಾರ್ಯಗಳು ಮುಂದಿನ ಪೀಳಿಗೆಗೆ ಪ್ರೇರಣೆಯಾಗಲಿದೆ ಎಂದು ಶ್ಲಾಘಿಸಿದರು.

ಟ್ರಸ್ಟಿಗಳಾದ ಆನಂದ್‌ ಕಟ್ಲೆ, ಶ್ರೀ ಸಾಯಿಪ್ರಸಾದ್, ಜೆಡಿಎಸ್‌ ರಾಜ್ಯ ಪ್ರದಾನ ಕಾರ್ಯದರ್ಶಿ ಎ.ನರಸಿಂಹಯ್ಯ, ಮೆಳೇಕೋಟೆ ಗ್ರಾಮ

ಪಂಚಾಯಿತಿ ಅಧ್ಯಕ್ಷ ನರಸಿಂಹಮೂರ್ತಿ, ಉಪಾಧ್ಯಕ್ಷ ಆರ್. ಚಿದಾನಂದ್, ಸದಸ್ಯ ಸಿ.ಕೆ. ದೇವರಾಜ್, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಸ್.ಎಲ್. ವೆಂಕಟೇಶ್‌ಬಾಬು, ವಿ.ಎಸ್‌.ಎಸ್‌.ಎನ್ ನಿರ್ದೇಶಕ ಎಸ್. ಮಂಜುನಾಥ್, ಮುಖಂಡರಾದ ರಾಮಣ್ಣ, ರಾಜಶೇಖರ್ ಸೇರಿದಂತೆ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry