ಕರಾವಳಿ ಜಿಲ್ಲೆಗಳಲ್ಲಿ ಜನಾಶೀರ್ವಾದ ಯಾತ್ರೆ: ಮೀನುಗಾರರ ಅಹವಾಲು ಆಲಿಸಿದ ರಾಹುಲ್

7

ಕರಾವಳಿ ಜಿಲ್ಲೆಗಳಲ್ಲಿ ಜನಾಶೀರ್ವಾದ ಯಾತ್ರೆ: ಮೀನುಗಾರರ ಅಹವಾಲು ಆಲಿಸಿದ ರಾಹುಲ್

Published:
Updated:
ಕರಾವಳಿ ಜಿಲ್ಲೆಗಳಲ್ಲಿ ಜನಾಶೀರ್ವಾದ ಯಾತ್ರೆ: ಮೀನುಗಾರರ ಅಹವಾಲು ಆಲಿಸಿದ ರಾಹುಲ್

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಜನಾಶೀರ್ವಾದ ಯಾತ್ರೆ ಕೈಗೊಳ್ಳಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳವಾರ ಬೆಳಿಗ್ಗೆ  ಇಲ್ಲಿನ ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ‌ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಎಐಸಿಸಿ ಅಧ್ಯಕ್ಷರನ್ನು ಸ್ವಾಗತಿಸಿದರು.

ವಿಮಾನ ‌ನಿಲ್ದಾಣದಿಂದ ರಾಹುಲ್ ಮತ್ತು ಇತರೆ ನಾಯಕರು ಹೆಲಿಕಾಪ್ಟರ್ ನಲ್ಲಿ ಉಡುಪಿಗೆ ತೆರಳಿದರು.

ಎರಡು ದಿನಗಳ ರಾಜ್ಯ ಪ್ರವಾಸದಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.

ಮೀನುಗಾರರ ಅಹವಾಲು ಆಲಿಸಿದ ರಾಹುಲ್:  ತೆಂಕ ಎರ್ಮಾಲ್ ನಲ್ಲಿ ಕಡಲ ಕಿನಾರೆಯ ಮೀನುಗಾರ ಜೊತೆ ರಾಹುಲ್ ಮಾತುಕತೆ ನಡೆಸಿದರು. ಸ್ಥಳೀಯ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಕಿಶೋರ್ ಸುವರ್ಣ ಅವರ ಮನೆಯ ಜಗಲಿಯಲ್ಲಿ ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಕುಳಿತ ರಾಹುಲ್, ಸ್ಥಳೀಯರ ಸಮಸ್ಯೆ ಆಲಿಸಿದರು. ಈ ವೇಳೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಪ್ರಮೋದ್ ಮಧ್ವರಾಜ್ ಇದ್ದರು.

ಕಿಶೋರ್ ಮನೆಯವರೊಂದಿಗೆ ಮಾತನಾಡಿದ್ದಲ್ಲೇ, ಮಕ್ಕಳನ್ನು ತೊಡೆಯ ಮೇಲೆ ಕೂರಿಸಿಕೊಂಡು ಮೈ ದಡವಿದರು.

ಜತೆಗೆ ಮನೆಯವರು ನೀಡಿದ ಎಳೆನೀರು ಕುಡಿದರು. ಮೀನುಗಾರರ ಮಾತುಗಳನ್ನು ಸಚಿವ ಪ್ರಮೋದ್ ಮಧ್ವರಾಜ್  ಹಿಂದಿ ಹಾಗೂ ಇಂಗ್ಲಿಷ್‌ನಲ್ಲಿ ತರ್ಜುಮೆ ಮಾಡಿ ರಾಹುಲ್ ಗೆ ಅರ್ಥೈಸುವ ಪ್ರಯತ್ನ ಮಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry