ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡಿಯುವ ನೀರಿನ ಸಮಸ್ಯೆ ನೀಗಿಸಿ

ಪಿಡಿಒಗಳ ಸಭೆಯಲ್ಲಿ ಶಾಸಕ ಡಾ.ಕೆ.ಸುಧಾಕರ್‌ ಅಧಿಕಾರಿಗಳಿಗೆ ಸೂಚನೆ
Last Updated 20 ಮಾರ್ಚ್ 2018, 7:18 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಬೇಸಿಗೆಯಲ್ಲಿ ಕಂಡು ಬರುವ ಶುದ್ಧ ಕುಡಿಯುವ ನೀರಿನ ಅಭಾವವನ್ನು ಸಂಬಂಧಪಟ್ಟ ಅಧಿಕಾರಿಗಳು ಸಮರ್ಥವಾಗಿ ನಿಭಾಯಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಡಾ.ಕೆ.ಸುಧಾಕರ್‌ ತಿಳಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಸಂಭಾಗಣದಲ್ಲಿ ಸೋಮವಾರ ಆಯೋಜಿಸಿದ್ದ ಪಿಡಿಒಗಳ ಸಭೆಯಲ್ಲಿ ಅವರು ಮಾತನಾಡಿದರು.

ತಾಲ್ಲೂಕಿನಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ 50 ಗ್ರಾಮಗಳಲ್ಲಿ ಈಗಾಗಲೇ ನೀರಿನ ಸಮಸ್ಯೆ ಎದುರಾಗಿದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಕೂಡಲೇ ಅಧಿಕಾರಿಗಳು ಮುಂಜಾಗ್ರತಾವಾಗಿ ಈಗಿನಿಂದಲೇ ಸೂಕ್ತ ಕ್ರಮ ಅನುಸರಿಸುವ ಮೂಲಕ ಜನರು ನೀರಿಗಾಗಿ ಪರಿದಾಡುವ ತೊಂದರೆ ತಪ್ಪಿಸಬೇಕು ಎಂದು
ಹೇಳಿದರು.

ಜನ ಪ್ರತಿನಿಧಿಗಳು ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಲು ಅಧಿಕಾರಿಗಳ ಪಾತ್ರ ಹೆಚ್ಚಿದೆ. ಈ ನಿಟ್ಟಿನಲ್ಲಿ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ತಾರತಮ್ಯಕ್ಕೆ ಒಳಗಾಗದೇ ನಾಗರಿಕರ ಸಮಸ್ಯೆಗಳಿಗೆ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಬೇಕು. ವಸತಿ ಯೋಜನೆಯಡಿ ಬಾಕಿಯಿರುವ ಮನೆಗಳನ್ನು ಮಂಜೂರು ಮಾಡುವಂತೆ ಪಿಡಿಒಗಳಿಗೆ ತಾಕೀತು ಮಾಡಿದರು.

ಅನಿಲಭಾಗ್ಯ ಯೋಜನೆಯಡಿ ಕ್ಷೇತ್ರಕ್ಕೆ ಪ್ರಥಮ ಹಂತದಲ್ಲಿ 4 ಸಾವಿರ ಫಲಾನುಭವಿಗಳ ಗುರಿ ನೀಡಿದ್ದರೂ, ಈವರೆಗೆ ಶೇ 50ಕ್ಕಿಂತ ಕಡಿಮೆ ಪ್ರಗತಿ ಸಾಧಿಸಿರುವುದು ಬೇಸರ ಸಂಗತಿ. ಎಲ್ಲ ಫಲಾನುಭವಿಗಳ ದಾಖಲಾತಿ ಗಣಕೀಕರಣಗೊಳಿಸಿ ಅನಿಲ ಸಂಪರ್ಕವನ್ನು ವಿತರಣೆಗೆ ಕ್ರಮಕೈಗೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಕಳೆದ 5 ವರ್ಷಗಳಲ್ಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಕ್ಷೇತ್ರದ 30 ಪಂಚಾಯಿತಿಗಳ ಎಲ್ಲ ಅಧಿಕಾರಿಗಳು ಉತ್ತಮವಾಗಿ ಶ್ರಮಿಸಿದ್ದಾರೆ. ಮುಂದಿನ ದಿನಗಳಲ್ಲಿ ಇದೇ ರೀತಿಯಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಿ ಜನರಿಂದ ಉತ್ತಮ ಹೆಸರು ಪಡೆದುಕೊಳ್ಳಬೇಕು
ಎಂದರು.

ತಾಲ್ಲೂಕು ಪಂಚಾಯಿತಿ ಇಒ ಸಂಜೀವಪ್ಪ, ಗೌರಿಬಿದನೂರು ತಾಲ್ಲೂಕು ಪಂಚಾಯಿತಿ ಇಒ ನಾರಾಯಣಸ್ವಾಮಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ. ರಾಮಸ್ವಾಮಿ, ಗ್ರಾಮೀಣ ನೀರು ಸರಬರಾಜು ಇಲಾಖೆ ಎಇಇ ಯೋಗೀಶ್, ಆಹಾರ ನಿರೀಕ್ಷಕ ಸೂರ್ಯನಾರಾಯಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT