ಬಿಸಿಯೂಟ ನೌಕರರ ಬೇಡಿಕೆ ಸರ್ಕಾರಕ್ಕೆ ನೋಟಿಸ್‌

7

ಬಿಸಿಯೂಟ ನೌಕರರ ಬೇಡಿಕೆ ಸರ್ಕಾರಕ್ಕೆ ನೋಟಿಸ್‌

Published:
Updated:

ಬೆಂಗಳೂರು: ಬಿಸಿಯೂಟ ತಯಾರಿಸುವ ಕಾರ್ಯಕರ್ತೆಯರಿಗೆ ಸೂಕ್ತ ವೇತನ ಮತ್ತು ಇನ್ನಿತರ ಸೌಲಭ್ಯ ಕಲ್ಪಿಸಿಕೊಡಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್) ಸಂಬಂಧಿಸಿದಂತೆ ಕಾರ್ಮಿಕ ಇಲಾಖೆ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ಸಾಮಾಜಿಕ ಕಾರ್ಯಕರ್ತೆ ನೌಹೀರಾ ಶೇಖ್‌ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಮತ್ತು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್‌ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

‘ಬಿಸಿಯೂಟ ಕಾರ್ಯಕರ್ತೆಯರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಲು ಅಗತ್ಯ ಕ್ರಮ ಕೈಗೊಳ್ಳಿ. ಕೋರ್ಟ್‌ಗೆ ಕೇವಲ ಮಾಹಿತಿ ಒದಗಿಸಿದರೆ ಸಾಲದು. ಸೂಕ್ತ ಪರಿಹಾರ ರೂಪಿಸಿಕೊಂಡು ಬನ್ನಿ’ ಎಂದು ಸರ್ಕಾರಿ ವಕೀಲರಿಗೆ ನ್ಯಾಯಪೀಠ ತಾಕೀತು ಮಾಡಿ, ವಿಚಾರಣೆಯನ್ನು ಏಪ್ರಿಲ್ 4ಕ್ಕೆ ಮುಂದೂಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry