‘ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ ಹಿಂಪಡೆಯುವ ಚಿಂತನೆ ಇಲ್ಲ’

7

‘ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆ ಹಿಂಪಡೆಯುವ ಚಿಂತನೆ ಇಲ್ಲ’

Published:
Updated:

ನವದೆಹಲಿ: ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಯನ್ನು (ಎಎಫ್‌ಎಸ್‌ಪಿಎ) ಹಿಂದಕ್ಕೆ ಪಡೆಯುವ ಅಥವಾ ಅದಕ್ಕೆ ತಿದ್ದುಪಡಿ ತರುವ ಯಾವುದೇ ಚಿಂತನೆ ಇಲ್ಲ ಎಂದು ಕೇಂದ್ರ ಸಚಿವ ಹಂಸರಾಜ್‌ ಗಂಗಾರಾಮ್‌ ಅಹಿರ್‌ ಹೇಳಿದ್ದಾರೆ.

‘ಲೋಕಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ಈ ಕಾಯ್ದೆಯನ್ನು ಮಾನವೀಯ ದೃಷ್ಟಿಕೋನದಿಂದ ನೋಡುವ ಹಾಗೂ ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿ ಮಾಡುವ ಸಂಬಂಧ ಪ್ರಸ್ತಾವವೊಂದು ಸರ್ಕಾರದ ಮುಂದಿದೆ’ ಎಂದು ವಿವರಿಸಿದ್ದಾರೆ.

ಅನುಮಾನಾಸ್ಪದ ವ್ಯಕ್ತಿಗಳನ್ನು ವಾರಂಟ್ ಇಲ್ಲದೆ ಬಂಧಿಸಲು ಅಥವಾ ಹತ್ಯೆ ಮಾಡು­ವಂತಹ ಹೆಚ್ಚಿನ ಹಾಗೂ ಅನಿಯಂತ್ರಿತ ಅಧಿಕಾರ ಈ ಕಾಯಿದೆ­ಯಡಿ ಭದ್ರತಾ ಪಡೆಗಳಿಗೆ ಪ್ರಾಪ್ತವಾಗುತ್ತದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry