ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

7

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

Published:
Updated:

ಬೆಂಗಳೂರು: ರಾಮಮೂರ್ತಿನಗರ ಬಳಿಯ ಬಿ.ಚನ್ನಸಂದ್ರದಲ್ಲಿ ಮಂಗಳವಾರ ಸಂಜೆ ದಿನೇಶ್ (24) ಎಂಬುವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಯಾದಗಿರಿಯ ದಿನೇಶ್ (24) ಅವರ ಪೋಷಕರು ಕೆಲಸ ಅರಸಿ ನಗರಕ್ಕೆ ಬಂದಿದ್ದರು. ಆರಂಭದಲ್ಲಿ ವಿಜಯನಗರದಲ್ಲಿ ವಾಸವಿದ್ದ ಪೋಷಕರು, ನಾಲ್ಕು ವರ್ಷಗಳ ಹಿಂದೆ ರಾಮಮೂರ್ತಿನಗರದ ಚರ್ಚ್‌ ಬಳಿಗೆ ವಾಸ್ತವ್ಯ ಬದಲಿಸಿದ್ದರು. ದ್ವಿತೀಯ ಪಿಯುಸಿಯಲ್ಲಿ ಅನುತ್ತೀರ್ಣಗೊಂಡಿದ್ದ ದಿನೇಶ್‌, ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ ಎಂದು ಪೊಲೀಸರು ತಿಳಿಸಿದರು.

ಚಿಕ್ಕಮ್ಮನ ಮಗ ಶಿವು ಜತೆಗೆ ದಿನೇಶ್‌ ಮನೆಯಿಂದ ಹೊರಗೆ ಹೋಗಿದ್ದರು. ಈ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದರು. ತೀವ್ರ ರಕ್ರಸ್ರಾವವಾಗಿ ಅವರು ಅಸುನೀಗಿದ್ದಾರೆ. ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry