24ರಿಂದ ಇತಿಹಾಸ ಕಾಂಗ್ರೆಸ್‌ ಅಧಿವೇಶನ

7

24ರಿಂದ ಇತಿಹಾಸ ಕಾಂಗ್ರೆಸ್‌ ಅಧಿವೇಶನ

Published:
Updated:

ಚಿಂತಾಮಣಿ: ನಗರದ ಸರ್ಕಾರಿ ಮಹಿಳಾ ಕಾಲೇಜಿನ ಇತಿಹಾಸ ವಿಭಾಗ, ರಾಜ್ಯ ಪತ್ರಾಗಾರ ಇಲಾಖೆ ಬೆಂಗಳೂರು, ರಾಜ್ಯ ಪುರಾತತ್ವ ಮತ್ತು ಪರಂಪರೆ ಇಲಾಖೆ ಮೈಸೂರು ವತಿಯಿಂದ ಮಾರ್ಚ್‌ 24ರಿಂದ 3 ದಿನಗಳ ಕಾಲ ಕರ್ನಾಟಕ ಇತಿಹಾಸ ಕಾಂಗ್ರೆಸ್‌ನ 27ನೇ ಅಧಿವೇಶನ/ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಯೋಜಿಸಲಾಗಿದೆ ಎಂದು ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಎಂ.ಎನ್‌.ರಘು ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ ಕರ್ನಾಟಕದ ಸಂಸ್ಕೃತಿ, ಸಮಾಜ, ಶಿಕ್ಷಣ, ಪರಂಪರೆ, ಆರ್ಥಿಕತೆ, ರಾಜಕೀಯ ಇತಿಹಾಸ ಹಾಗೂ ಸಮಕಾಲೀನ ಸಮಸ್ಯೆಗಳ ಬಗ್ಗೆ ಸಂಶೋಧನಾ ಪ್ರಬಂಧಗಳನ್ನು ಸಂಶೋಧಕರು ಮಂಡಿಸುತ್ತಾರೆ ಎಂದು ತಿಳಿಸಿದರು.

ಪ್ರಾಂಶುಪಾಲ ಪ್ರೊ.ವಿ. ರಾಮಕೃಷ್ಣಪ್ಪ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry