ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ದೂಡಾ’ ಜಂಟಿ ನಿರ್ದೇಶಕರ ನಿವಾಸದ ಮೇಲೆ ಎಸಿಬಿ ದಾಳಿ

Last Updated 21 ಮಾರ್ಚ್ 2018, 9:09 IST
ಅಕ್ಷರ ಗಾತ್ರ

ದಾವಣಗೆರೆ: ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ (ದೂಡಾ)ದ ಜಂಟಿ ನಿರ್ದೇಶಕ ಗೋಪಾಲಕೃಷ್ಣ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಮಂಗಳವಾರ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಳಿಗ್ಗೆ ನಿಟುವಳ್ಳಿ ಬಡಾವಣೆಯಲ್ಲಿರುವ ಅವರ ನಿವಾಸ ಹಾಗೂ ಎರಡು ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದರು.

ದಾಳಿಯಲ್ಲಿ ಅಧಿಕಾರಿಗಳು ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಪತ್ತೆಯಾದ ಆಸ್ತಿಯ ವಿವರಗಳು ಬಹಿರಂಗಗೊಂಡಿಲ್ಲ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದ ಮೇಲೆ ಈಚೆಗೆ ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಗೋಪಾಲಕೃಷ್ಣ ಅವರ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT