ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾವಗಡ ಸೋಲಾರ್ ಪಾರ್ಕ್‌ಗೆ ವಿಶ್ವಮಟ್ಟದಲ್ಲಿ ಮೆಚ್ಚುಗೆ

Last Updated 21 ಮಾರ್ಚ್ 2018, 10:43 IST
ಅಕ್ಷರ ಗಾತ್ರ

ಬೆಂಗಳೂರು: ಪಾವಗಡದಲ್ಲಿ ನಿರ್ಮಾಣವಾಗುತ್ತಿರುವ ಬೃಹತ್ ಸೋಲಾರ್ ಪಾರ್ಕ್‌ಗೆ ವಿಶ್ವ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.

ಸೋಲಾರ್ ಪಾರ್ಕ್ ಕುರಿತು ಅಮೆರಿಕದ ಲಾಸ್ ಏಂಜಲೀಸ್ ಟೈಮ್ಸ್ ವರದಿ ಪ್ರಕಟಿಸಿದ್ದು, ಮೆಚ್ಚುಗೆ ವ್ಯಕ್ತಪಡಿಸಿದೆ.

‘ವಿಶ್ವದ ಅತಿ ದೊಡ್ಡ ಸೋಲಾರ್ ಪಾರ್ಕ್‌ ಭಾರತದಲ್ಲಿ ನಿರ್ಮಾಣವಾಗುತ್ತಿದೆ’ ಎಂಬ ಶೀರ್ಷಿಕೆಯಡಿ ಸೋಲಾರ್ ಪಾರ್ಕ್ ಬಗ್ಗೆ ವಿಸ್ತೃತ ವರದಿ ಪ್ರಕಟಿಸಲಾಗಿದೆ. ಸೋಲಾರ್ ಪಾರ್ಕ್ ಪೂರ್ಣಗೊಂಡ ಬಳಿಕ 2000 ಮೆಗಾವಾಟ್ ವಿದ್ಯುತ್ ಉತ್ಪಾದನೆಯಾಗಲಿದ್ದು, 7 ಲಕ್ಷ ಮನೆಗಳಿಗೆ ವಿದ್ಯುತ್ ಪೂರೈಕೆಯಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಅಮೆರಿಕದ ಡೊನಾಲ್ಡ್ ಟ್ರಂಪ್ ನೇತೃತ್ವದ ಸರ್ಕಾರ ಪ್ಯಾರಿಸ್​ ಒಪ್ಪಂದದಿಂದ ಹಿಂದೆ ಸರಿದು ಕಲ್ಲಿದ್ದಲಿನ ಮೊರೆ ಹೋಗಲು ಮುಂದಾಗಿರವ ಈ ಹೊತ್ತಿನಲ್ಲಿ ಭಾರತ ಸೌರ ವಿದ್ಯುತ್​ ಉತ್ಪಾದನೆಗೆ ಹೆಚ್ಚಿನ ಮಹತ್ವ ನೀಡುತ್ತಿದೆ ಎಂದು ವರದಿಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಲಾಗಿದ್ದು, ಪಾವಗಡ ಸೋಲಾರ್​ ಪಾರ್ಕ್‌ ಅನ್ನು ಉದಾಹರಣೆಯಾಗಿ ಉಲ್ಲೇಖಿಸಲಾಗಿದೆ.

ಲಿಯೊನಾರ್ಡೊ ಡಿ ಕಾಪ್ರಿಯೊ ರಿಟ್ವೀಟ್: ವಿಶ್ವದ ಅತಿ ದೊಡ್ಡ ಸೋಲಾರ್ ಪಾರ್ಕ್ ಭಾರತದಲ್ಲಿ ನಿರ್ಮಾಣವಾಗುತ್ತಿರುವ ಬಗ್ಗೆ ಹಾಲಿವುಡ್‌ನ ಖ್ಯಾತ ನಟ ಲಿಯೊನಾರ್ಡೊ ಡಿ ಕಾಪ್ರಿಯೊ ಸಹ ಟ್ವಿಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಲಾಸ್ ಏಂಜಲೀಸ್ ಟೈಮ್ಸ್‌ನ ವರದಿಯನ್ನು ಅವರು ರಿಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT