ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ವಿವಿ, 4 ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಹೆಚ್ಚಿನ ಶೈಕ್ಷಣಿಕ ಸ್ವಾಯತ್ತತೆ

Last Updated 21 ಮಾರ್ಚ್ 2018, 11:45 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದ ಮೈಸೂರು ವಿಶ್ವವಿದ್ಯಾಲಯ ಹಾಗೂ ಇತರ ನಾಲ್ಕು ಉನ್ನತ ಶಿಕ್ಷಣ ಸಂಸ್ಥೆಗಳು ಯಾವುದೇ ಹೊಸ ಯೋಜನೆಗಳನ್ನು ಆರಂಭಿಸಲು ವಿಶ್ವವಿದ್ಯಾಲಯದ ಧನಸಹಾಯ ಆಯೋಗದ (ಯುಜಿಸಿ) ಅನುಮತಿಯನ್ನು ಇನ್ನು ಮುಂದೆ ಕೇಳುವ ಅವಶ್ಯಕತೆ ಇಲ್ಲ.

ಏಕೆಂದರೆ, ಈ ಶಿಕ್ಷಣ ಸಂಸ್ಥೆಗಳಿಗೆ ಕೆಟಗರಿ–2 ಅಡಿಯಲ್ಲಿ ಯುಜಿಸಿಯು  ಹೆಚ್ಚಿನ ಶೈಕ್ಷಣಿಕ ಮತ್ತು ಹಣಕಾಸಿನ ಸ್ವಾಯತ್ತತೆ ನೀಡಿದೆ. ಮಂಗಳವಾರ ನಡೆದ ಸಭೆಯಲ್ಲಿ ದೇಶದ ಒಟ್ಟು 50ಕ್ಕೂ ವಿಶ್ವವಿದ್ಯಾಲಯಗಳಿಗೆ ಈ ಅರ್ಹತೆ ನೀಡಲಾಗಿದೆ.

ಈ ಪಟ್ಟಿಯಲ್ಲಿ ಬೆಂಗಳೂರಿನ ಜೈನ್‌ ವಿಶ್ವವಿದ್ಯಾಲಯ, ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿ, ಬೆಳಗಾವಿಯ ಕೆಎಲ್‌ಇ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ಹಾಗೂ ಮೈಸೂರಿನ ಜೆಎಸ್‌ಎಸ್‌ ಉನ್ನತ ಸಿಕ್ಷಣ ಮತ್ತು ಸಂಶೋಧನಾ ಅಕಾಡೆಮಿ ಸೇರಿವೆ.

ಈ ಎಲ್ಲ ಶಿಕ್ಷಣ ಸಂಸ್ಥೆಗಳು ಇನ್ನುಮುಂದೆ ಯುಜಿಸಿಯ ಅನುಮತಿ ಪಡೆಯದೇ ಹೊಸ ಕಾರ್ಯಕ್ರಮ ಪ್ರಾರಂಭಿಸಬಹುದು, ದೂರ ಶಿಕ್ಷಣ ಕಲಿಕಾ ಕಾರ್ಯಕ್ರಮ, ವಿದೇಶಿ ಶಿಕ್ಷಕರ ನೇಮಕ, ವಿದೇಶಿ ವಿದ್ಯಾರ್ಥಿಗಳಿಗೆ ದಾಖಲಾತಿಯನ್ನೂ ಮಾಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT