‘ಬಿಜೆಪಿ ಗೆಲುವು ಖಚಿತ’

7
ಬಿಜೆಪಿ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷ ಅನುರಾಗ್‌ ಠಾಕೂರ್‌

‘ಬಿಜೆಪಿ ಗೆಲುವು ಖಚಿತ’

Published:
Updated:

ಮಾನ್ವಿ: ‘ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ನಾಯಕತ್ವಕ್ಕೆ ಜನಮನ್ನಣೆ ಮುಂದುವರಿದಿದ್ದು, ಕರ್ನಾಟದಲ್ಲಿಯೂ ಕೂಡ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬರುವುದು ಖಚಿತ’ಎಂದು ಬಿಜೆಪಿ ರಾಷ್ಟ್ರೀಯ ಯುವ ಘಟಕದ ಅಧ್ಯಕ್ಷ ಅನುರಾಗ್‌ ಸಿಂಗ್‌ ಠಾಕೂರ್‌ ವಿಶ್ವಾಸ ವ್ತಕ್ತಪಡಿಸಿದರು.

ಸೋಮವಾರ ಪಟ್ಟಣದ ಎಪಿಎಂಸಿ ರೈತ ಭವನದಲ್ಲಿ ಬಿಜೆಪಿ ತಾಲ್ಲೂಕು ಘಟಕದ ಮತಗಟ್ಟೆ ಸಮಿತಿ, ಶಕ್ತಿ ಕೇಂದ್ರ ಹಾಗೂ ಮಂಡಲ ಪದಾಧಿಕಾರಿಗಳು, ಮುಖಂಡರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

‘ದೇಶದಲ್ಲಿ ಮೋದಿ ಅವರ ಆಡಳಿತ ಹಾಗೂ ಜನಪರ ಯೋಜನೆಗಳ ಬಗ್ಗೆ ಜನರಲ್ಲಿ ನಂಬಿಕೆ, ವಿಶ್ವಾಸ ಹೆಚ್ಚುತ್ತಿದೆ. ಎಲ್ಲಾ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ಮೂಲಕ ಜನರು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ. ಇದು ಕರ್ನಾಟಕದಲ್ಲಿಯೂ ಮುಂದುವರಿಯಲಿದೆ’ ಎಂದರು.

ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಎನ್‌.ಶಂಕ್ರಪ್ಪ, ಮಾಜಿ ಶಾಸಕರಾದ ಗಂಗಾಧರ ನಾಯಕ ಮತ್ತು ಬಸನಗೌಡ ಬ್ಯಾಗವಾಟ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಜೆ.ಶರಣಪ್ಪಗೌಡ ಸಿರವಾರ, ರಾಜ್ಯ ಖಾದಿ ಮಂಡಳಿ ಮಾಜಿ ಅಧ್ಯಕ್ಷ ಹರವಿ ಶಂಕರಗೌಡ, ರಾಜ್ಯ ಎಸ್‌ಟಿ ಮೋರ್ಚಾ ಖಜಾಂಚಿ ಕೊಟ್ರೇಶಪ್ಪ ಕೋರಿ, ತಾಲ್ಲೂಕು ಅಧ್ಯಕ್ಷ ಶರಣಪ್ಪಗೌಡ ನಕ್ಕುಂದಿ, ರಾಜ್ಯ ರೈತ ಮೋರ್ಚಾ ಸಮಿತಿ ಸದಸ್ಯ ಮಾನಪ್ಪ ನಾಯಕ, ಗಿರೆಯ್ಯ ಪಾಟೀಲ್‌ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry