ಉಗ್ರರ ಜತೆಗಿನ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಹುತಾತ್ಮ

7

ಉಗ್ರರ ಜತೆಗಿನ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಹುತಾತ್ಮ

Published:
Updated:
ಉಗ್ರರ ಜತೆಗಿನ ಗುಂಡಿನ ಚಕಮಕಿಯಲ್ಲಿ ನಾಲ್ವರು ಯೋಧರು ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಉಗ್ರರ ಜತೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ. ಇವರಲ್ಲಿ ಇಬ್ಬರು ಯೋಧರೂ ಸೇರಿದ್ದಾರೆ.

‘ಅರಂಪೋರಾದ ದಟ್ಟ ಅರಣ್ಯದಲ್ಲಿ ಮಂಗಳವಾರದಿಂದ ನಡೆಯುತ್ತಿರುವ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನೂ ಹತ್ಯೆ ಮಾಡಲಾಗಿದೆ’ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ. ಹುತಾತ್ಮರಾದ ಯೋಧರ ಗುರುತು ಇನ್ನೂ ಪತ್ತೆಯಾಗಿಲ್ಲ. ಇಬ್ಬರು ಸಿಬ್ಬಂದಿಯನ್ನು ದೀಪಕ್ ಮತ್ತು ಅಶ್ರಫ್ ಎಂದು ಗುರುತಿಸಲಾಗಿದೆ.

ಮಸೀದಿಯೊಂದರಲ್ಲಿ ಅಡಗಿದ್ದ ಉಗ್ರರು ಕಾಡಿನತ್ತ ಓಡಲು ಆರಂಭಿಸಿದಾಗ ನಾಲ್ವರನ್ನು ಭದ್ರತಾ ಸಿಬ್ಬಂದಿ ಹತ್ಯೆ ಮಾಡಿದ್ದಾರೆ. ಇನ್ನಿಬ್ಬರು ಕಾಡಿನಲ್ಲಿ ಅಡಗಿ ಕೂತಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry