‘ಸ್ವಯಂಸೇವಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಿ’

7

‘ಸ್ವಯಂಸೇವಕರಿಗೆ ಸಾಮಾಜಿಕ ಭದ್ರತೆ ಕಲ್ಪಿಸಿ’

Published:
Updated:

ಬೆಂಗಳೂರು: ಸ್ವಯಂಸೇವಾ ಸಂಸ್ಥೆಗಳ ಕಾರ್ಯಕರ್ತರಿಗೆ ಸಾಮಾಜಿಕ ಭದ್ರತೆ ನೀಡಬೇಕು ಎಂದು ಕರ್ನಾಟಕ ಗ್ರಾಮಾಭ್ಯುದಯ ಸ್ವಯಂಸೇವಾ ಸಂಸ್ಥೆಗಳ ಒಕ್ಕೂಟ ಆಗ್ರಹಿಸಿದೆ.

ಬುಧವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಎಚ್.ಬಿ.ರಾಮಕೃಷ್ಣಗೌಡ, ‘ದಲಿತ, ಹಿಂದುಳಿದ, ಆದಿವಾಸಿ, ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ರಾಜ್ಯದಲ್ಲಿ ಸಾವಿರಾರು ಸ್ವಯಂಸೇವಾ ಸಂಘಗಳು ಕಾರ್ಯನಿರ್ವಹಿಸುತ್ತಿವೆ. ಈ ಸಂಸ್ಥೆಗಳಲ್ಲಿ ದುಡಿಯುತ್ತಿರುವ ಶೇ 90ರಷ್ಟು ಜನರು ದಲಿತ, ಹಿಂದುಳಿದ ಹಾಗೂ ಬಡ ಕುಟುಂಬದವರು. ಬಹುತೇಕ ಸಂಸ್ಥೆಗಳು ಸರ್ಕಾರದ ಅನುದಾನ ಅಥವಾ ಸ್ಥಳೀಯ ದಾನಿಗಳು ನೀಡುವ ಹಣದಲ್ಲಿ ಕೆಲಸ ಮಾಡುತ್ತಿವೆ. ಸಂಸ್ಥೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಯಾವುದೇ ಭದ್ರತೆಯಿಲ್ಲ’ ಎಂದರು.

‘ಸ್ವಯಂಸೇವಕರಿಗೆ ಕನಿಷ್ಠ ವೇತನ ನೀಡಬೇಕು. ಇಎಸ್‌ಐ, ಪಿಎಫ್ ಸೌಲಭ್ಯ ನೀಡಬೇಕು. ವಸತಿ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಗುರುತಿನ ಚೀಟಿ ನೀಡಬೇಕು’ ಎಂದು ಹೇಳಿದರು.

ತಮಗೆ ಉಚಿತ ಬಸ್ ಪಾಸ್ ನೀಡಬೇಕು ಎಂದೂ ಇದೇ ವೇಳೆ ಅವರು ಮನವಿ ಮಾಡಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry