ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೆರಿಗೆ ವಂಚನೆ ಪ್ರಕರಣ: ಸಚಿವ ಡಿ.ಕೆ.ಶಿವಕುಮಾರ್‌ಗೆ ಜಾಮೀನು

Last Updated 22 ಮಾರ್ಚ್ 2018, 11:02 IST
ಅಕ್ಷರ ಗಾತ್ರ

ಬೆಂಗಳೂರು: ತೆರಿಗೆ ವಂಚನೆ ಆರೋಪದ ಪ್ರಕರಣದಲ್ಲಿ ಇಂಧನ ಸಚಿವ ಡಿ.ಕೆ‌.ಶಿವಕುಮಾರ್ ಗೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

₹ 25,000 ಭದ್ರತ ಠೇವಣಿ ಇಡುವುದು, ಸಾಕ್ಷ್ಯ ನಾಶ ಮಾಡಬಾರದು, ಸಾಕ್ಷಿಗಳ ಮೇಲೆ ಒತ್ತಡ ಹೇರಬಾರದು, ತನಿಖೆಗೆ ಸಹಕರಿಸಬೇಕು ಎಂಬ ಷರತ್ತು ವಿಧಿಸಿ ನ್ಯಾಯಾಧೀಶ ಎಂ.ಎಸ್. ಆಳ್ವಾ ಜಾಮೀನು ಮಂಜೂರು ಮಾಡಿದ್ದಾರೆ.

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸಲ್ಲಿಸಿದ್ದ ವರದಿ ಆಧರಿಸಿ ನ್ಯಾಯಾಲಯ ಮೂರು ಪ್ರಕರಣ ದಾಖಲಿಸಿಕೊಂಡಿತ್ತು. ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಕೂಡ ಜಾರಿ ಮಾಡಿತ್ತು.

ಗುರುವಾರ ಬೆಳಿಗ್ಗೆ ಡಿ.ಕೆ.ಶಿವಕುಮಾರ್, ಅವರ ಸಹೋದರ ಡಿ.ಕೆ‌.ಸುರೇಶ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT