ಜೆಡಿಎಸ್‌ ಬಂಡಾಯ ಶಾಸಕರ ರಾಜೀನಾಮೆ ಇಂದು

7

ಜೆಡಿಎಸ್‌ ಬಂಡಾಯ ಶಾಸಕರ ರಾಜೀನಾಮೆ ಇಂದು

Published:
Updated:

ಬೆಂಗಳೂರು: ಜೆಡಿಎಸ್‌ನಿಂದ ಅಮಾನತುಗೊಂಡಿರುವ ಏಳು ಶಾಸಕರು ತಮ್ಮ ಸದಸ್ಯತ್ವಕ್ಕೆ ಶುಕ್ರವಾರ ರಾಜೀನಾಮೆ ಸಲ್ಲಿಸಲಿದ್ದಾರೆ.

2016ರಲ್ಲಿ ನಡೆದ ರಾಜ್ಯಸಭಾ ಚುನಾವಣೆಯ ವೇಳೆ ಕಾಂಗ್ರೆಸ್ ಅಭ್ಯರ್ಥಿಗೆ ಅಡ್ಡ ಮತದಾನ ಮಾಡಿದ ಕಾರಣಕ್ಕೆ ಚಲುವರಾಯಸ್ವಾಮಿ, ಎಚ್.ಸಿ. ಬಾಲಕೃಷ್ಣ, ಅಖಂಡ ಶ್ರೀನಿವಾಸಮೂರ್ತಿ, ಭೀಮಾನಾಯ್ಕ, ರಮೇಶ ಬಂಡಿಸಿದ್ದೇಗೌಡ, ಜಮೀರ್ ಅಹಮದ್‌, ಇಕ್ಬಾಲ್ ಅನ್ಸಾರಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು. ಇವರೆಲ್ಲರ ಶಾಸಕತ್ವವನ್ನು ಅನರ್ಹಗೊಳಿಸುವಂತೆ ಜೆಡಿಎಸ್‌ ಶಾಸಕರು ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದ್ದರು. ಇದಿನ್ನೂ ವಿಚಾರಣೆ ಹಂತದಲ್ಲಿದೆ.

ಕಾಂಗ್ರೆಸ್ ಸೇರಲು ಅಣಿಯಾಗಿರುವ ಈ ಏಳು ಶಾಸಕರು ಶುಕ್ರವಾರ ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಮೂಲಗಳು ಹೇಳಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry