ಚುಟುಕು

7

ಚುಟುಕು

Published:
Updated:

ಇಂದು ನೀರಿನ ಅದಾಲತ್‌

ಜಲಮಂಡಳಿಯ ಪೂರ್ವ-4 ಉಪವಿಭಾಗದಲ್ಲಿ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ ಮತ್ತಿತರ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಇದೇ 23ರಂದು ಬೆಳಿಗ್ಗೆ 9.30 ರಿಂದ 11ರವರೆಗೆ ನೀರಿನ ಅದಾಲತ್‌ ನಡೆಸಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಅರ್ಜಿ ಆಹ್ವಾನ

ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಹಾಗೂ ಪ್ರಾಧ್ಯಾಪಕ ಹುದ್ದೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್‌ 23 ಕೊನೆ ದಿನ ಎಂದು ಪ್ರಕಟಣೆ ತಿಳಿಸಿದೆ.

ವೆಬ್‌ಸೈಟ್‌: www.bangaloreuniversity.ac.in

ಕೆಪಿಸಿಸಿಗೆ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ ಸಾಮಾಜಿಕ ಜಾಲತಾಣ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಮಂಡ್ಯ, ರಾಮ ನಗರ ಜಿಲ್ಲೆಯ ಸಾಮಾಜಿಕ ಜಾಲತಾಣ ಘಟಕದ ಉಸ್ತುವಾರಿಯಾಗಿ ಎಚ್‌.ಎಂ. ರಾಜಪ್ಪ ಅವರನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry