ಕೇಂದ್ರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಕಾಂಗ್ರೆಸ್‌ ನಿರ್ಧಾರ

7

ಕೇಂದ್ರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಕಾಂಗ್ರೆಸ್‌ ನಿರ್ಧಾರ

Published:
Updated:

ನವದೆಹಲಿ: ಕೇಂದ್ರ ಸರ್ಕಾರದ ವಿರುದ್ಧ  ಮಂಗಳವಾರ ಅವಿಶ್ವಾಸ ಗೊತ್ತುವಳಿ ಮಂಡಿಸಲು ಕಾಂಗ್ರೆಸ್‌ ಸಜ್ಜಾಗಿದೆ.

ಅವಿಶ್ವಾಸ ಗೊತ್ತುವಳಿ ಮಂಡನೆ ಸಂದರ್ಭದಲ್ಲಿ ಹಾಜರಿರಬೇಕು ಎಂದು ಪಕ್ಷದ ಸಂಸದರಿಗೆ ಮೂರು ಸಾಲಿನ ವಿಪ್‌ ಜಾರಿಗೊಳಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವಿಶ್ವಾಸ ಗೊತ್ತುವಳಿಯನ್ನು ಮಂಡಿಸಲಿದ್ದಾರೆ. ಅವಿಶ್ವಾಸ ಗೊತ್ತುವಳಿಗೆ ಇತರ ಪಕ್ಷಗಳ ನೆರವನ್ನೂ ಅವರು ಕೋರಿದ್ದಾರೆ ಎಂದು ಮೂಲಗಳು ಶುಕ್ರವಾರ ಮಾಹಿತಿ ನೀಡಿವೆ.

ಟಿಡಿಪಿ ಮತ್ತು ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷಗಳು ಅವಿಶ್ವಾಸ ಗೊತ್ತುವಳಿ ಮಂಡಿಸಲು ನೋಟಿಸ್‌ ನೀಡಿವೆ. ಆದರೆ, ಸುಗಮ ಕಲಾಪ ನಡೆಯದ ಕಾರಣ ಅವಿಶ್ವಾಸ ಗೊತ್ತುವಳಿ ಮಂಡಿಸಲು ಅವಕಾಶ ಲಭಿಸಿಲ್ಲ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry