ಲೋಕಪಾಲರ ನೇಮಕಕ್ಕೆ ಆಗ್ರಹ: ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ಆರಂಭ

7

ಲೋಕಪಾಲರ ನೇಮಕಕ್ಕೆ ಆಗ್ರಹ: ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ಆರಂಭ

Published:
Updated:
ಲೋಕಪಾಲರ ನೇಮಕಕ್ಕೆ ಆಗ್ರಹ: ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ಆರಂಭ

ನವದೆಹಲಿ: ಲೋಕಪಾಲರ ನೇಮಕಕ್ಕೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಶುಕ್ರವಾರದಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಇಲ್ಲಿನ ರಾಮಲೀಲಾ ಮೈದಾನದಲ್ಲಿ ಆರಂಭಿಸಿದ್ದಾರೆ. 2011ರಲ್ಲೂ ಅಣ್ಣ ಇಲ್ಲೇ ಉಪವಾಸ ಸತ್ಯಾಗ್ರಹ ನಡೆಸಿದ್ದರು.

ವಿವಿಧ ರಾಜ್ಯಗಳಲ್ಲಿ ಲೋಕಾಯುಕ್ತರ ನೇಮಕ  ಮಾಡಬೇಕು ಎಂದು ಒತ್ತಾಯಿಸಿರುವ ಅಣ್ಣಾ ಕೃಷಿ ಸಮಸ್ಯೆಗಳಿಗೆ ಸ್ಪಂದಿಸಲು ಸಲಹೆಗಳನ್ನು ನೀಡಿರುವ ಸ್ವಾಮಿನಾಥನ್‌ ವರದಿ ಜಾರಿಗೊಳಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ.

ಲೋಕಾಯಕ್ತರ ನೇಮಿಸಿ: 12 ರಾಜ್ಯಗಳಲ್ಲಿ ಲೋಕಾಯಕ್ತರನ್ನು ಏಕೆ ನೇಮಕ ಮಾಡಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ  ಆಯಾ ಮುಖ್ಯ ಕಾರ್ಯದರ್ಶಿಗಳಿಂದ ವಿವರಣೆ ಕೇಳಿದೆ.

ಲೋಕಾಯುಕ್ತರನ್ನು ನೇಮಕ ಮಾಡದೇ ಇರುವುದಕ್ಕೆ ಕಾರಣಗಳನ್ನು ತಿಳಿಸಿ ಎಂದು ಜಮ್ಮ ಮತ್ತು ಕಾಶ್ಮೀರ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್‌, ಪುದುಚೇರಿ, ತಮಿಳುನಾಡು, ತೆಲಂಗಾಣ, ತ್ರಿಪುರಾ, ಅರುಣಾಚಲ ಪ್ರದೇಶ, ದೆಹಲಿ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗೆ ನ್ಯಾಯಮೂರ್ತಿ ರಂಜನ್‌ ಗೊಗೋಯ್‌ ಮತ್ತು ಆರ್‌. ಭಾನುಮತಿ ಅವರಿದ್ದ ಪೀಠವು ಸೂಚಿಸಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ವಿಚಾರಣೆ ನಡೆಸಿದ ಪೀಠವು, ಬಜೆಟ್‌ನಲ್ಲಿ ಲೋಕಾಯುಕ್ತಕ್ಕೆ ಹೆಚ್ಚುವರಿ ಅನುದಾನ ಮೀಸಲಿಡಬೇಕು ಮತ್ತು ಪರಿಣಾಮಕಾರಿ ಕಾರ್ಯನಿರ್ವಹಣೆಗೆ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry