‘ಎಡಗೈ, ಬಲಗೈ ಸಮಾಜಕ್ಕೂ ಟಿಕೆಟ್‌ ಕೊಡಿ’

7

‘ಎಡಗೈ, ಬಲಗೈ ಸಮಾಜಕ್ಕೂ ಟಿಕೆಟ್‌ ಕೊಡಿ’

Published:
Updated:
‘ಎಡಗೈ, ಬಲಗೈ ಸಮಾಜಕ್ಕೂ ಟಿಕೆಟ್‌ ಕೊಡಿ’

ಬೆಂಗಳೂರು: ‘ಮುಂದಿನ ಚುನಾವಣೆಯಲ್ಲಿ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿಯ ಎಡಗೈ ಅಥವಾ ಬಲಗೈ ಸಮುದಾಯದವರಿಗೆ ಕಾಂಗ್ರೆಸ್‌ ಪಕ್ಷದಿಂದ ಟಿಕೆಟ್‌ ನೀಡಬೇಕು’ ಎಂದು ಒತ್ತಾಯಿಸಿ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಕೆ.ಆರ್.ಪುರ ತಾಲ್ಲೂಕು ಕಚೇರಿ ಆವರಣದ ಅಂಬೇಡ್ಕರ್‌ ಪ್ರತಿಮೆ ಎದುರು ಧರಣಿ ನಡೆಸಿದರು.

‘ಕ್ಷೇತ್ರದಲ್ಲಿ 1.80 ಲಕ್ಷ ಮಂದಿ ದಲಿತರಿದ್ದು, ಕಾಂಗ್ರೆಸ್‌ ಪಕ್ಷವನ್ನೇ ಬೆಂಬಲಿಸಿಕೊಂಡು ಬರುತ್ತಿದ್ದಾರೆ. ಯಾವುದೇ ಕಾರಣಕ್ಕೂ ಭೋವಿ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಬಾದು. ತಪ್ಪಿದರೆ, ಚುನಾವಣೆಯನ್ನು ಬಹಿಷ್ಕರಿಸಬೇಕಾಗುತ್ತದೆ’ ಎಂದು ದಲಿತ ಮುಖಂಡ ಅಣ್ಣಯ್ಯ ಎಚ್ಚರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry