‘ನಿತ್ಯ 82 ಟನ್‌ ಜೈವಿಕ ತ್ಯಾಜ್ಯ ಉತ್ಪತ್ತಿ’

7

‘ನಿತ್ಯ 82 ಟನ್‌ ಜೈವಿಕ ತ್ಯಾಜ್ಯ ಉತ್ಪತ್ತಿ’

Published:
Updated:
‘ನಿತ್ಯ 82 ಟನ್‌ ಜೈವಿಕ ತ್ಯಾಜ್ಯ ಉತ್ಪತ್ತಿ’

ನೆಲಮಂಗಲ: ಜೈವಿಕ ವೈದ್ಯಕೀಯ ತ್ಯಾಜ್ಯ ಆಸ್ಪತ್ರೆಗಳಲ್ಲಷ್ಟೇ ಅಲ್ಲದೆ ಪ್ರತಿ ಮನೆಯಲ್ಲೂ ಉತ್ಪತ್ತಿಯಾಗುತ್ತಿದೆ. ತ್ಯಾಜ್ಯಗಳನ್ನು ವಿಂಗಡಿಸಿ ವಿಲೇವಾರಿ ಮಾಡುವುದರಿಂದ ಸಾಂಕ್ರಾಮಿಕ ರೋಗ ಹಾಗೂ ಇತರೆ ಅಪಾಯಗಳನ್ನು ತಪ್ಪಿಸಬಹುದು ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಅಧಿಕಾರಿ ಡಾ.ಎ.ರಮೇಶ್‌ ತಿಳಿಸಿದರು.

ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಪಟ್ಟಣದ ಹರ್ಷ ರಾಮಯ್ಯ ಆಸ್ಪತ್ರೆಯಲ್ಲಿ ಆಯೋಜಿಸಿದ್ದ ‘ಜೈವಿಕ ವೈದ್ಯಕೀಯ ತ್ಯಾಜ್ಯ’ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಆಸ್ಪತ್ರೆಗಳು ನಾಯಿಕೊಡೆಗಳಂತೆ ಹುಟ್ಟಿಕೊಳ್ಳುತ್ತಿವೆ. ಶೇ 95 ರಷ್ಟು ಆಸ್ಪತ್ರೆಗಳು ಮಂಡಳಿಗೆ ಸಲ್ಲಿಸಬೇಕಾದ ವಾರ್ಷಿಕ ವರದಿಯನ್ನು ಸರಿಯಾಗಿ ಸಲ್ಲಿಸುತ್ತಿಲ್ಲ. ಇದು ಮುಂದುವರಿದರೆ ಕ್ರಮ ಜರುಗಿಸಲಾಗುವುದು’ ಎಂದರು.

ಮಂಡಳಿಯ ಬೆಂಗಳೂರು ವಿಭಾಗಿಯ ಅಧಿಕಾರಿ ಸಿ.ಎಂ.ಸತೀಶ್‌, ‘ಜೈವಿಕ ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಲಾಗುವುದು. ಬೆಂಗಳೂರಿನಲ್ಲಿ 3 ಸೇರಿದಂತೆ ರಾಜ್ಯದಲ್ಲಿ ಒಟ್ಟು 25 ಸಂಸ್ಕರಣಾ ಘಟಕಗಳಿವೆ. ರಾಜ್ಯದಲ್ಲಿ ಪ್ರತಿದಿನ 82 ಟನ್‌ಗಳಷ್ಟು ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಪ್ರಾಥಮಿಕ ಹಂತದಲ್ಲೇ ತ್ಯಾಜ್ಯವನ್ನು ನಿರ್ದಿಷ್ಟ ಬಣ್ಣದ ಬುಟ್ಟಿಗಳಲ್ಲಿ ವಿಂಗಡಿಸಿದರೆ ಸಂಸ್ಕರಣಾ ಪ್ರಕ್ರಿಯೆ ಸುಲಭವಾಗುತ್ತದೆ’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry