ಮೈಸೂರು: ಚಾಮುಂಡಿ ದರ್ಶನ ಪಡೆದ ರಾಹುಲ್‌ ಗಾಂಧಿ

7

ಮೈಸೂರು: ಚಾಮುಂಡಿ ದರ್ಶನ ಪಡೆದ ರಾಹುಲ್‌ ಗಾಂಧಿ

Published:
Updated:
ಮೈಸೂರು: ಚಾಮುಂಡಿ ದರ್ಶನ ಪಡೆದ ರಾಹುಲ್‌ ಗಾಂಧಿ

ಮೈಸೂರು: ಜನಾಶೀರ್ವಾದ ಯಾತ್ರೆ ಪ್ರಯುಕ್ತ ಸಾಂಸ್ಕೃತಿಕ ನಗರಿಗೆ ಬಂದಿರುವ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಾಡ ಅಧಿದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದರು.

ವಿಶೇಷ ವಿಮಾನದಲ್ಲಿ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬೆಳಿಗ್ಗೆ 9.15ಕ್ಕೆ ಬಂದಿಳಿದ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹೂಗುಚ್ಛ ನೀಡಿ ಸ್ವಾಗತಿಸಿದರು. ಕಾಂಗ್ರೆಸ್‌ ಉಸ್ತುವಾರಿ ವೇಣುಗೋಪಾಲ್‌, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಸೇರಿ ಕಾಂಗ್ರೆಸ್‌ ಮುಖಂಡರು ಹಾಜರಿದ್ದರು.

ಒಂದೇ ಕಾರಿನಲ್ಲಿ ನಂಜನಗೂಡು ರಸ್ತೆಯಲ್ಲಿ ಸಾಗಿದ ರಾಹುಲ್‌, ಸಿದ್ದರಾಮಯ್ಯ ಹಾಗೂ ಪರಮೇಶ್ವರ್‌ ಅವರು ಲಲಿತಮಹಲ್‌ ರಸ್ತೆ, ತಾವರೆಕಟ್ಟೆಯ ಮಾರ್ಗವಾಗಿ ಚಾಮುಂಡಿಬೆಟ್ಟ ತಲುಪಿದರು.

ರಾಹುಲ್‌ ಭೇಟಿಯ ಹಿನ್ನೆಲೆಯಲ್ಲಿ ದೇಗುಲದ ಸುತ್ತ ಎಸ್‌ಪಿಜಿ ಭದ್ರತೆಯನ್ನು ಬಿಗಿಗೊಳಿಸಿದೆ. ನಸುಕಿನ 5 ಗಂಟೆಯಿಂದಲೇ ಸಾರ್ವಜನಿಕ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry