ಬೇಲೂರು ಕ್ಷೇತ್ರದ ಶಾಸಕ ವೈ.ಎನ್.ರುದ್ರೇಶಗೌಡ ನಿಧನ

7

ಬೇಲೂರು ಕ್ಷೇತ್ರದ ಶಾಸಕ ವೈ.ಎನ್.ರುದ್ರೇಶಗೌಡ ನಿಧನ

Published:
Updated:
ಬೇಲೂರು ಕ್ಷೇತ್ರದ ಶಾಸಕ ವೈ.ಎನ್.ರುದ್ರೇಶಗೌಡ ನಿಧನ

ಹಾಸನ: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಬೇಲೂರು ಕ್ಷೇತ್ರದ ಶಾಸಕ ವೈ.ಎನ್.ರುದ್ರೇಶಗೌಡ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

 1986ರಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರಾಗುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದರು. 1996ರಲ್ಲಿ ಮತ್ತೊಮ್ಮೆ ಜಿ.ಪಂ. ಸದಸ್ಯರಾಗಿ ಆಯ್ಕೆಯಾದ ಬಳಿಕ ಜಿಲ್ಲಾ ಪಂಚಾಯತಿಯ ಅಧ್ಯಕ್ಷ ಗಾದಿಯನ್ನು ಏರಿದ್ದರು.

1996ರಲ್ಲಿ ಜನತಾ ದಳದಿಂದ ಸ್ಪರ್ಧಿಸಿ ಲೋಕಸಭೆಯನ್ನು ಪ್ರವೇಶಿಸಿದ್ದರು.

2008 ಮತ್ತು 2013ರಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಚುನಾಯಿತರಾಗಿದ್ದರು. 

1955ರಲ್ಲಿ ಜನಿಸಿದ ಅವರು ಬಿಎಸ್ಸಿ, ಎಲ್‌ಎಲ್‌ಬಿ ಪದವೀಧರರಾಗಿದ್ದರು.  

ಮೃತರಿಗೆ ಪತ್ನಿ, ಪುತ್ರಿ, ಐವರು ಸಹೋದರರು ಮತ್ತು ಐವರು ಸಹೋದರಿಯರು ಇದ್ದಾರೆ. 

ಇಂದು(ಶನಿವಾರ) ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ವ್ಯವಸ್ಥೆ ಮಾಡಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry