ಎಸ್ಸೆಸ್ಸೆಲ್ಸಿ ಪರೀಕ್ಷೆ: 661 ಗೈರು

7

ಎಸ್ಸೆಸ್ಸೆಲ್ಸಿ ಪರೀಕ್ಷೆ: 661 ಗೈರು

Published:
Updated:

ಮಂಡ್ಯ: ಜಿಲ್ಲೆಯಾದ್ಯಂತ ಶುಕ್ರವಾರ ನಡೆದ ಎಸ್‌ಎಸ್‌ಎಸ್‌ಸಿ ಕನ್ನಡ ವಿಷಯದ ಪರೀಕ್ಷೆಗೆ 21,318 ವಿದ್ಯಾರ್ಥಿಗಳು ಹಾಜರಾದರು.

ಪರೀಕ್ಷೆಗೆ ಒಟ್ಟು 21,979 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದರು. ಅವರಲ್ಲಿ 661 ವಿದ್ಯಾರ್ಥಿಗಳು ಗೈರಾಗಿದ್ದರು. 86 ಕೇಂದ್ರಗಳಲ್ಲಿ ನಡೆದ ಪರೀಕ್ಷೆ ಶಾಂತಿಯುತವಾಗಿತ್ತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕಿ ಪದ್ಮಾವತಮ್ಮ ಹಲವು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

‘ಯಾವುದೇ ಅಹಿತಕರ ಘಟನೆ ನಡೆಯದೆ ಪರೀಕ್ಷೆ ಸುಸೂತ್ರವಾಗಿತ್ತು. ಪರೀಕ್ಷಾ ಕೇಂದ್ರದ ಸಿಬ್ಬಂದಿ, ವಿಚಕ್ಷಣ ದಳದ ಸಿಬ್ಬಂದಿ ಶಿಸ್ತಿನಿಂದ ಕಾರ್ಯ ನಿರ್ವಹಣೆ ಮಾಡಿದ್ದಾರೆ’ ಎಂದು ಡಿಡಿಪಿಐ ಸೂರ್ಯ ಪ್ರಕಾಶ್‌ ಮೂರ್ತಿ ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry