ಗ್ರಾಮೀಣ ಬ್ಯಾಂಕ್‌ ನೌಕರರ ಮುಷ್ಕರ ನಾಳೆಯಿಂದ

7

ಗ್ರಾಮೀಣ ಬ್ಯಾಂಕ್‌ ನೌಕರರ ಮುಷ್ಕರ ನಾಳೆಯಿಂದ

Published:
Updated:

ಹುಬ್ಬಳ್ಳಿ: ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಹಾಗೂ ಉದ್ಯೋಗಿಗಳ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಗ್ರಾಮೀಣ ಬ್ಯಾಂಕುಗಳ ಕಾರ್ಮಿಕ ಸಂಘಟನೆಗಳ ಸಂಯುಕ್ತ ವೇದಿಕೆ ಇದೇ 26ರಿಂದ 28ರವರಗೆ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ರಾಜ್ಯದ ಕಾವೇರಿ ಗ್ರಾಮೀಣ ಬ್ಯಾಂಕ್‌ (ಮೈಸೂರು), ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್‌ (ಬಳ್ಳಾರಿ) ಮತ್ತು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ (ಧಾರವಾಡ) ಒಟ್ಟು 1,680 ಶಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಮತ್ತು ಅಧಿಕಾರಿಗಳು ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಖಿಲ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಿ.ಕೆ.ಬನ್ನಿಗೋಳ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಗ್ರಾಮೀಣ ಬ್ಯಾಂಕುಗಳಲ್ಲಿ ಖಾಸಗಿ ಬಂಡವಾಳ ಹೂಡಿಕೆ ಸಲುವಾಗಿ ಈಗಾಗಲೇ ಕರಡು ಮಾರ್ಗಸೂಚಿಯನ್ನು ಕೇಂದ್ರ ಹಣಕಾಸು ಸಚಿವಾಲಯ ರಚಿಸಿದೆ. ಇದು ಗ್ರಾಮೀಣ ಬ್ಯಾಂಕುಗಳ ಸ್ಥಾಪನೆಯ ಉದ್ದೇಶಕ್ಕೆ ವಿರುದ್ಧವಾಗಿದೆ’ ಎಂದು ಅವರು ಆರೋಪಿಸಿದರು.

‘ದೇಶದ 56 ಗ್ರಾಮೀಣ ಬ್ಯಾಂಕುಗಳಿಂದ 30 ಕೋಟಿಗೂ ಅಧಿಕ ಗ್ರಾಹಕರು ಸೇವೆ ಪಡೆಯುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಅವಕಾಶ ಸೃಷ್ಟಿಸಲು ಸಣ್ಣ, ಅತಿ ಸಣ್ಣ ರೈತರಿಗೆ, ಗ್ರಾಮೀಣ ಕರಕುಶಲಕರ್ಮಿಗಳಿಗೆ, ಸಣ್ಣ ವ್ಯಾಪಾರಿಗಳಿಗೆ ಆರ್ಥಿಕ ಸಹಾಯ ನೀಡುತ್ತಿವೆ. ಪ್ರತಿ ವರ್ಷ

₹10 ಸಾವಿರ ಕೋಟಿ ತೆರಿಗೆ ಪಾವತಿಸುತ್ತಿದ್ದು, ಇವುಗಳನ್ನು ಖಾಸಗೀಕರಣ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ಕ್ರಮ ಖಂಡನೀಯ’ ಎಂದರು.

ನೌಕರರ ಬೇಡಿಕೆಗಳು

* ರಾಷ್ಟ್ರೀಕೃತ ಬ್ಯಾಂಕುಗಳು ಮತ್ತು ಗ್ರಾಮೀಣ ಬ್ಯಾಂಕುಗಳ ನೌಕರರ ವೇತನ, ಸೇವಾ ಹಾಗೂ ಬಡ್ತಿ ನಿಯಮಾವಳಿಗಳಲ್ಲಿ ಸಮಾನತೆ ಜಾರಿಯಾಗಬೇಕು

* ಅನುಕಂಪ ಆಧಾರಿತ ನೇಮಕಾತಿ ಮಾಡಿಕೊಳ್ಳಬೇಕು

* ದಿನಗೂಲಿ ನೌಕರರ ಸೇವೆಯನ್ನು ಕಾಯಂಗೊಳಿಸಬೇಕು

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry