ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲಹಂಕ ತಾಲ್ಲೂಕು ಆರಂಭ

Last Updated 24 ಮಾರ್ಚ್ 2018, 19:40 IST
ಅಕ್ಷರ ಗಾತ್ರ

ಬೆಂಗಳೂರು: ಯಲಹಂಕ ನೂತನ ತಾಲ್ಲೂಕು ಶನಿವಾರ ಉದ್ಘಾಟನೆಗೊಂಡಿತು. ಯಲಹಂಕದ ಮಿನಿ ವಿಧಾನಸೌಧದ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಉದ್ಘಾಟಿಸಿದರು.

ಈ ಹಿಂದೆ ಚಾಲ್ತಿಯಲ್ಲಿದ್ದ ಬೆಂಗಳೂರು ಉತ್ತರ (ಹೆಚ್ಚುವರಿ) ತಾಲ್ಲೂಕನ್ನು ಯಲಹಂಕ ತಾಲ್ಲೂಕು ಎಂದು ರಚಿಸಲಾಗಿದೆ. ಇದರಿಂದ ಆಡಳಿತದಲ್ಲಿ ಸುಧಾರಣೆಯಾಗಿ ಈ ಭಾಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

94ಸಿಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ಫಲಾನುವಿಗಳಿಗೆ ಕಟ್ಟಿಕೊಂಡಿರುವ ಮನೆಯ ವಿಸ್ತೀರ್ಣದ ಜೊತೆಗೆ ಅವರ ಸ್ವಾಧೀನ ಅನುಭದಲ್ಲಿರುವ ಜಾಗವನ್ನೂ
ಸೇರಿಸಿ ಹಕ್ಕುಪತ್ರ ನೀಡಲು ಕಾನೂನಿನಲ್ಲಿ ತಿದ್ದುಪಡಿ ತರಲಾಗುವುದು ಎಂದು ಅವರು ತಿಳಿಸಿದರು.

ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ, ‘ಯಲಹಂಕವನ್ನು ತಾಲ್ಲೂಕು ಎಂದು ಘೋಷಣೆ ಮಾಡಬೇಕೆಂಬ ಬಹಳ ದಿನಗಳ ಬೇಡಿಕೆ ಈಡೇರಿದೆ. ಮುಖ್ಯಮಂತ್ರಿಯಾಗಿದ್ದ ಜಗದೀಶ ಶೆಟ್ಟರ್ ಅವರಿಗೆ 2013ರಲ್ಲಿ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈಗಿನ ಸರ್ಕಾರ ಕಳೆದ ಜನವರಿಯಲ್ಲಿ ಅಧಿಕೃತವಾಗಿ ಗೆಜೆಟ್‌ನಲ್ಲಿ ಘೋಷಣೆ ಮಾಡಿತು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT