ಇಬ್ಬರು ಉಗ್ರರ ಹತ್ಯೆ

7

ಇಬ್ಬರು ಉಗ್ರರ ಹತ್ಯೆ

Published:
Updated:
ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶನಿವಾರ ನಡೆದ ಗುಂಡಿನ ಚಕಮಕಿಯಲ್ಲಿ ಜೈಷ್ ಎ ಮೊಹಮದ್ ಸಂಘಟನೆಗೆ ಸೇರಿದ ಪಾಕಿಸ್ತಾನ ಮೂಲದ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹತ್ಯೆ ಮಾಡಿದೆ.

‘ಶಿಸ್ತ್ರಗಾಮ್ ಹಳ್ಳಿಯಲ್ಲಿ ಉಗ್ರರು ಅಡಗಿರುವ ಬಗ್ಗೆ ಸಿಕ್ಕ ವಿಶೇಷ ಮಾಹಿತಿ ಆಧರಿಸಿ ಭದ್ರತಾ ಪಡೆ ಶುಕ್ರವಾರ ತಡರಾತ್ರಿ ಶೋಧ ಕಾರ್ಯ ಆರಂಭಿಸಿದಾಗ ಉಗ್ರರು ಗುಂಡಿನ ದಾಳಿ ನಡೆಸಿದರು. ಆಗ ನಮ್ಮ ಸಿಬ್ಬಂದಿ ಪ್ರತಿದಾಳಿ ಮಾಡಿದರು’ ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.

‘ರಾತ್ರಿ ಶೋಧ ಕಾರ್ಯವನ್ನು ನಿಲ್ಲಿಸಿದ ಭದ್ರತಾ ಪಡೆ ಬಿಗಿ ಬಂದೋವಸ್ತ್ ಮಾಡಿತ್ತು. ಶನಿವಾರ ಬೆಳಿಗ್ಗೆ ಮತ್ತೆ ಶೋಧ ಆರಂಭಿಸಿ ಉಗ್ರರನ್ನು ಹತ್ಯೆ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry