ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯ ಹೆದ್ದಾರಿಯಲ್ಲಿ ಶವವಿಟ್ಟು ಪ್ರತಿಭಟನೆ

Last Updated 24 ಮಾರ್ಚ್ 2018, 19:40 IST
ಅಕ್ಷರ ಗಾತ್ರ

ಕಕ್ಕೇರಾ (ಯಾದಗಿರಿ ಜಿಲ್ಲೆ): ಇಲ್ಲಿಗೆ ಸಮೀಪದ ತಿಂಥಣಿ ಗ್ರಾಮದಲ್ಲಿ ಲೈಂಗಿಕ ಕಿರುಕುಳದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿ, ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ಮೃತಪಟ್ಟರು.

ಆಕೆಯ ಸಂಬಂಧಿಕರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ರಾತ್ರಿ 8ಗಂಟೆ ಸುಮಾರಿಗೆ ಬೀದರ್‌-ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯ ಶಾಂತಪುರ ಕ್ರಾಸ್‌ ಬಳಿಯ ರಸ್ತೆಯಲ್ಲಿ ಶವವಿಟ್ಟು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಮೂರು ಗಂಟೆ ಸಂಚಾರ ಸ್ಥಗಿತಗೊಂಡಿತ್ತು.

‘ಮೃತ ವಿದ್ಯಾರ್ಥಿನಿಯ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಹಾಗೂ ರಕ್ಷಣೆ ನೀಡಬೇಕು. ಕೃತ್ಯ ಎಸಗಿದ ಆರೋಪಿಗಳನ್ನು ತಕ್ಷಣ ಬಂಧಿಸಿ, ಕಠಿಣ ಶಿಕ್ಷೆಗೆ ಗುರಿಪಡಿಸಬೇಕು’ ಎಂದು ಒತ್ತಾಯಿಸಿದರು. ಬಳಿಕ ಸುರಪುರ ತಹಶೀಲ್ದಾರ್‌ ಸುರೇಶ ಅಂಕಲಗಿ ಅವರಿಗೆ ಮನವಿ ಸಲ್ಲಿಸಿದರು.

‘ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್ ತಿಳಿಸಿದರು.

ದ್ವಿತೀಯ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯು ಮಾ.19ರಂದು ತಿಂಥಣಿ ಗ್ರಾಮದ ಹಳ್ಳಕ್ಕೆ ಬಟ್ಟೆ ತೊಳೆಯಲು ಹೋದಾಗ 6ಜನರು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದರು. ಇದರಿಂದ ಮನನೊಂದ ಆಕೆ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT