ಮಹಿಳೆಯ ಮಾನಭಂಗಕ್ಕೆ ಯತ್ನ–ಎಎಸ್‌ಐ ಬಂಧನ

7

ಮಹಿಳೆಯ ಮಾನಭಂಗಕ್ಕೆ ಯತ್ನ–ಎಎಸ್‌ಐ ಬಂಧನ

Published:
Updated:
ಮಹಿಳೆಯ ಮಾನಭಂಗಕ್ಕೆ ಯತ್ನ–ಎಎಸ್‌ಐ ಬಂಧನ

ನರಸಿಂಹರಾಜಪುರ: ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಆರೋಪದ ಮೇಲೆ ನರಸಿಂಹರಾಜಪುರ ಠಾಣೆಯ ಎಎಸ್‌ಐ ಕುಮಾರ ನಾಯ್ಕ ಎಂಬಾತನನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯ ಆತನಿಗೆ ಜಾಮೀನು ನೀಡಿದೆ.

ಚುನಾವಣಾ ಆಯುಕ್ತರ ಆದೇಶದ ಮೇರೆಗೆ ಚುನಾವಣೆಗೆ ಸಂಬಂಧಿಸಿದ ಮಾಹಿತಿ ಸಂಗ್ರಹಿಸಲು ತಾಲ್ಲೂಕಿನ ಕಾನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮವೊಂದಕ್ಕೆ ಶುಕ್ರವಾರ ಮಧ್ಯಾಹ್ನ  ಭೇಟಿ ನೀಡಿದ ಎಎಸ್‌ಐ, ಸ್ಥಳೀಯ ಮಾಹಿತಿದಾರರ ಸಹಿ ಪಡೆಯಲು ಗ್ರಾಮದ ಮನೆಯೊಂದಕ್ಕೆ ಹೋಗಿದ್ದ. ಮನೆಯಲ್ಲಿ ಮಹಿಳೆ ಒಬ್ಬರೇ ಇರುವುದನ್ನು ಗಮನಿಸಿ ಮಾನಭಂಗಕ್ಕೆ ಯತ್ನಿಸಿದ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅಮಾನತು: ಆರೋಪಿಯನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅಣ್ಣಾಮಲೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry