ಎಡೆಯೂರಿನಲ್ಲಿ ವೈಭವದ ಸಿದ್ದಲಿಂಗೇಶ್ವರಸ್ವಾಮಿ ರಥೋತ್ಸವ

7

ಎಡೆಯೂರಿನಲ್ಲಿ ವೈಭವದ ಸಿದ್ದಲಿಂಗೇಶ್ವರಸ್ವಾಮಿ ರಥೋತ್ಸವ

Published:
Updated:
ಎಡೆಯೂರಿನಲ್ಲಿ ವೈಭವದ ಸಿದ್ದಲಿಂಗೇಶ್ವರಸ್ವಾಮಿ ರಥೋತ್ಸವ

ಕುಣಿಗಲ್: ತಾಲ್ಲೂಕಿನ ಎಡೆಯೂರು ಸಿದ್ದಲಿಂಗೇಶ್ವರಸ್ವಾಮಿ ರಥೋತ್ಸವ ರಾಜ್ಯದ ವಿವಿಧೆಡೆಗಳಿಂದ ಬಂದಿದ್ದ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.

ರಥೋತ್ಸವದ ಅಂಗವಾಗಿ ಸ್ವಾಮಿ ಗದ್ದುಗೆ ಮತ್ತು ಕಲ್ಲುಗಾಲಿ ರಥಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಹರಾಜು ಪ್ರಕ್ರಿಯೆಯಲ್ಲಿ ಷಟ್‌ಸ್ಥಲ ಧ್ವಜವನ್ನು ₹ 3.26 ಲಕ್ಷಕ್ಕೆ ಬೆಳಗಾವಿಯ ಚಂದ್ರಶೇಖರ್ ಪಡೆದರು.

ಬಾಳೆಹೊನ್ನೂರು ಶಾಖಾಮಠದ ರೇಣುಕಾ ಶಿವಚಾರ್ಯ ಸ್ವಾಮೀಜಿ, ಕುಪ್ಪೂರು ಡಾ.ಯತೀಶ್ವರ ಶಿವಾಚಾರ್ಯ ಸ್ವಾಮೀಜಿ, ತಾವರೆಕೆರೆ ಮಠದ ಡಾ.ಅಭಿನವ ಸಿದ್ದಲಿಂಗ ಶಿವಾಚಾರ್ಯಸ್ವಾಮೀಜಿ, ದೊಡ್ಡಗುಣಿ ರೇವಣಸಿದ್ದ ಶಿವಾಚಾರ್ಯಸ್ವಾಮೀಜಿ, ಬೆಳ್ಳಾವಿ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ಅಂಕನಹಳ್ಳಿ ಶಿವರುದ್ರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕಾರ್ಯನಿರ್ವಹಣಾಧಿಕಾರಿ ಆರತಿ ಆನಂದ್, ತಹಶೀಲ್ದಾರ್ ನಾಗರಾಜ್ ನಂದಿಧ್ವಜ ಪೂಜೆ ನೆರವೇರಿಸಿದ ನಂತರ ಉತ್ಸವಕ್ಕೆ ಚಾಲನೆ ನೀಡಲಾಯಿತು.

ಭಕ್ತರು ರಥ ಎಳೆದು, ದವನ, ಬಾಳೆ ಹಣ್ಣು, ಕಾಳು ಮೆಣಸು ತೂರಿ ಸಂಭ್ರಮಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry