ಕಾರು ಅಪಘಾತ: ಕ್ರಿಕೆಟಿಗ ಮೊಹಮ್ಮದ್ ಶಮಿ ಪ್ರಾಣಾಪಾಯದಿಂದ ಪಾರು

7

ಕಾರು ಅಪಘಾತ: ಕ್ರಿಕೆಟಿಗ ಮೊಹಮ್ಮದ್ ಶಮಿ ಪ್ರಾಣಾಪಾಯದಿಂದ ಪಾರು

Published:
Updated:
ಕಾರು ಅಪಘಾತ: ಕ್ರಿಕೆಟಿಗ ಮೊಹಮ್ಮದ್ ಶಮಿ ಪ್ರಾಣಾಪಾಯದಿಂದ ಪಾರು

ನವದೆಹಲಿ: ಭಾರತ ಕ್ರಿಕೆಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಪ್ರಯಾಣಿಸುತ್ತಿದ್ದ ಕಾರಿಗೆ ಟ್ರಕ್‌ ಡಿಕ್ಕಿ ಹೊಡೆದಿದ್ದು ಶಮಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಭಾನುವಾರ ಬೆಳಗ್ಗೆ ಡೆಹ್ರಾಡೂನ್‌ನಿಂದ ನವದೆಹಲಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.

ಘಟನೆಯಲ್ಲಿ ಶಮಿ ಅವರ ತಲೆಗೆ ಗಾಯಗಳಾಗಿದ್ದು 10 ಹೊಲಿಗೆ ಹಾಕಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಡೆಹ್ರಾಡೂನ್ ಆಸ್ಪತ್ರೆಯಿಂದ ಮನೆಗೆ ತೆರಳಿರುವ ಶಮಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry