ಶುದ್ಧ ಕುಡಿಯುವ ನೀರು

7
ನಾನು ಸಿಎಂ ಆದರೆ

ಶುದ್ಧ ಕುಡಿಯುವ ನೀರು

Published:
Updated:
ಶುದ್ಧ ಕುಡಿಯುವ ನೀರು

ರಾಜ್ಯದ ಎಲ್ಲೆಡೆ ಶುದ್ಧ ಕುಡಿಯುವ ನೀರು ಪೂರೈಕೆಗೆ ವ್ಯವಸ್ಥೆ ಮಾಡುತ್ತೇನೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ. ನೀರಾವರಿ ಯೋಜನೆಗಳ ಅಭಿವೃದ್ಧಿ ಹಾಗೂ ರೈತರ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸುತ್ತೇನೆ.

ಆರ್ಥಿಕವಾಗಿ ಹಿಂದುಳಿದ ಎಲ್ಲಾ ಜಾತಿ, ಧರ್ಮದವರಿಗೂ ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುತ್ತೇನೆ. ಪ್ರತಿ ಮೂರು ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳು, ರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳ ಸಭೆಯನ್ನು ಬೆಂಗಳೂರಿನಲ್ಲಿ ಆಯೋಜಿಸುತ್ತೇನೆ. ಬೆಂಗಳೂರಿನ ಕಸದ ಸಮಸ್ಯೆ ಹಾಗೂ ಟ್ರಾಫಿಕ್ ಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿಸುತ್ತೇನೆ. ಬೃಹತ್‌ ಕೈಗಾರಿಕೆಗಳನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸ್ಥಾಪಿಸುತ್ತೇನೆ. ರಾಜ್ಯದ ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಪಡಿಸುತ್ತೇನೆ.

– ಸಂತೋಷ್‌ ಉಡುಗಾಣಿ,ಶಿವಮೊಗ್ಗ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry