ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾವೇರಿ ನಿರ್ವಹಣಾ ಮಂಡಳಿಯೇ ಬೇಕು: ಡಿಎಂಕೆ

Last Updated 25 ಮಾರ್ಚ್ 2018, 19:30 IST
ಅಕ್ಷರ ಗಾತ್ರ

ಈರೋಡ್‌: ಕಾವೇರಿ ನಿರ್ವಹಣಾ ಮಂಡಳಿಯನ್ನು (ಸಿಎಂಬಿ) ಶೀಘ್ರವೇ ರಚಿಸಬೇಕು. ಇದರ ಬದಲು ಬೇರೆ ಯಾವುದೇ ಸಮಿತಿ ರಚಿಸುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಡಿಎಂಕೆ ತಿಳಿಸಿದೆ.

ಭಾನುವಾರ ಇಲ್ಲಿ ಆರಂಭವಾದ ಪಕ್ಷದ ಎರಡು ದಿನಗಳ ಸಭೆಯಲ್ಲಿ ಈ ಕುರಿತು ವಿಶೇಷ ನಿರ್ಣಯ ಅಂಗೀಕರಿಸಲಾಗಿದೆ. ಕೇಂದ್ರ ಸರ್ಕಾರ ನಿರ್ವಹಣಾ ಮಂಡಳಿ ಬದಲಿಗೆ, ಮೇಲುಸ್ತುವಾರಿ ಸಮಿತಿ ರಚಿಸುವ ಸಾಧ್ಯತೆ ಇದೆ ಎಂಬ ಹಿನ್ನೆಲೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ. ಸ್ಟಾಲಿನ್‌ ಈ ನಿರ್ಣಯ ಮಂಡಿಸಿದರು.

ಕರ್ನಾಟಕದ ಜತೆಗಿನ ಜಲವಿವಾದಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಎಐಎಡಿಎಂಕೆ, ರಾಜ್ಯದ ಹಕ್ಕುಗಳನ್ನು ಸಮರ್ಥವಾಗಿ ಪ್ರತಿಪಾದಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಡಿಎಂಕೆ ಪಕ್ಷ, ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT