‘ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಯತ್ನ’

7

‘ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಯತ್ನ’

Published:
Updated:

ಯಲ್ಲಾಪುರ: ’ಚುನಾವಣೆಯ ಉದ್ದೇಶ ಇಟ್ಟುಕೊಂಡು ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ. ಜನರು ಇಟ್ಟಿರುವ ಪ್ರೀತಿ– ವಿಶ್ವಾಸವನ್ನು ಉಳಿಸಿಕೊಳ್ಳಲು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಯತ್ನಿಸಿದ್ದೇನೆ’ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದರು.

ತಾಲ್ಲೂಕಿನ ಇಡಗುಂದಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಚಿನ್ನಾಪುರ ಕ್ರಾಸ್ ಬಳಿ ₹3.5 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಬಸ್ ತಂಗುದಾಣಕ್ಕೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಶಿರಲೆ ಜಲಪಾತಕ್ಕೆ ಹೋಗುವ ₹ 1.5 ಕೋಟಿ ವೆಚ್ಚದ, ಕಾಂಕ್ರಿಟ್ ರಸ್ತೆಯನ್ನು ಉದ್ಘಾಟಿಸಿದರು. ₹ 50 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಸುಣಜೋಗ ಕಾಂಕ್ರಿಟ್ ರಸ್ತೆಗೆ ಗುದ್ದಲಿ ಪೂಜೆ ನೆರವೇರಿಸಿದರು. ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಗಂಗಾ ಗೌಡ, ಸದಸ್ಯ ನಾಗರಾಜ ನಾಯ್ಕ, ಹಿರಿಯರಾದ ಪ್ರೇಮಾನಂದ ನಾಯ್ಕ, ಮಹಾಬಲೇಶ್ವರ ಭಟ್ಟ ಸುಣಜೋಗ, ಶಿವರಾಮ ಭಟ್ಟ, ನಾರಾಯಣ ಭಟ್ಟ, ಕೃಷ್ಣಾನಂದ ನಾಯ್ಕ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry