4

ಕನ್ನಡದಲ್ಲೆ ಕರಪತ್ರ ಮುದ್ರಿಸಿ ಚುನಾವಣಾ ಆಯೋಗಕ್ಕೆ ಪತ್ರ

Published:
Updated:

ಬೆಂಗಳೂರು: ವಿದ್ಯುನ್ಮಾನ ಮತಯಂತ್ರ ಬಳಕೆ ಬಗ್ಗೆ ಅರಿವು ಮೂಡಿಸುವ ಕರಪತ್ರಗಳನ್ನು ಕನ್ನಡದಲ್ಲೇ ಮುದ್ರಿಸಿ ವಿತರಿಸುವಂತೆ ಚುನಾವಣಾ ಆಯೋಗಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕೋರಿದೆ.

‘ಭಾನುವಾರದಿಂದ ಆರಂಭವಾಗಿರುವ ಅಭಿಯಾನದಲ್ಲಿ ಎಲ್ಲ ಮಾಹಿತಿಗಳನ್ನು ಇಂಗ್ಲಿಷ್‌ನಲ್ಲಿ ನೀಡಲಾಗುತ್ತಿದೆ. ಚುನಾವಣೆ ಪ್ರಕ್ರಿಯೆಯಲ್ಲಿ ತೊಡಗುವ ನೌಕರರಿಗೆ ನೀಡುತ್ತಿರುವ ಕರಪತ್ರಗಳು ಕೂಡ ಇಂಗ್ಲಿಷ್‌ನಲ್ಲೇ ಇವೆ ಎಂಬ ದೂರುಗಳು ಬಂದಿವೆ’ ಎಂದು ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ. ಸಿದ್ಧರಾಮಯ್ಯ ಹೇಳಿದ್ದಾರೆ.

‘ಕನ್ನಡ ಭಾಷೆಯಲ್ಲೇ ಎಲ್ಲ ಮಾಹಿತಿಗಳ ಲಭ್ಯವಾಗುವಂತೆ ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು ಅವರು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್‌ಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry