ಜೋಜನಾ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

7
ನೀರು ಮಿತ ಬಳಕೆಗೆ ನ್ಯಾಯಾಧೀಶೆ ಕೆ.ಎಂ. ಸೈನಿ ಸಲಹೆ

ಜೋಜನಾ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

Published:
Updated:
ಜೋಜನಾ ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ

ಔರಾದ್: ತಾಲ್ಲೂಕಿನ ಜೋಜನಾ ಗ್ರಾಮದ ಕೆರೆ ಹೂಳೆತ್ತುವ ಕಾಮಗಾರಿಗೆ ಭಾನುವಾರ ಚಾಲನೆ ನೀಡಲಾಯಿತು.

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯವರು ಕೈಗೊಂಡ ಈ ಮಹತ್ವಾಕಾಂಕ್ಷಿ ಕಾಮಗಾರಿಗೆ ಹಿರಿಯ ಸಿವಿಲ್ ನ್ಯಾಯಾಧೀಶೆ ಕೆ.ಎಂ. ಸೈನಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ‘ಮನುಷ್ಯ ಸೇರಿದಂತೆ ಪ್ರತಿಯೊಂದು ಜೀವಿ ಬದುಕಿರುವುದು ನೈಸರ್ಗಿಕ ಸಂಪನ್ಮೂಲದ ಮೇಲೆ. ಆದರೆ ಇಂತಹ ಅಮೂಲ್ಯವಾದ ಸಂಪನ್ಮೂಲ ಬರಿದಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ನೀರು ಮಿತವಾಗಿ ಬಳಸುವುದು ಪ್ರತಿಯೊಬ್ಬರ ಕರ್ತವ್ಯ. ಗ್ರಾಮೀಣ ಪ್ರದೇಶದಲ್ಲಿರುವ ನೀರಿನ ಮೂಲ ಗುರುತಿಸಿ ಅವುಗಳ ಸಂರಕ್ಷಣೆ ಮಾಡುವುದು ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯವರು ಕೆರೆಗಳ ಜೀರ್ಣೋದ್ಧಾರ ಕೆಲಸಕ್ಕೆ ಮುಂದಾಗಿರುವುದು ಶ್ಲಾಘನೀಯ’ ಎಂದರು.

ಬೀದರ್ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ರಾವ್ ಮಾತನಾಡಿ, ‘ಕೆರೆಗಳು ರೈತರ ಜೀವನಾಡಿ. ಅವು ಹಾಳಾಗದಂತೆ ಸಂರಕ್ಷಣೆಯಾಗಬೇಕು’ ಎಂದರು.

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಜಿಲ್ಲಾ ನಿರ್ದೇಶಕ ಪ್ರವೀಣಕು ಮಾರ ಮಾತನಾಡಿ, ‘ಗ್ರಾಮೀಣ ಪ್ರದೇ ಶದ ಜನರ ಜೀವನಮಟ್ಟ ಸುಧಾರಣೆ ಗಾಗಿ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿದೆ’ ಎಂದು ತಿಳಿಸಿದರು.

ಗ್ರಾಮೀಣಾಭಿವೃದ್ಧಿ ಸಂಸ್ಥೆ ತಾಲ್ಲೂಕು ಸಂಯೋಜಕ ಮಹಾಂತೇಶ್ ಮಾತನಾಡಿ, ‘ತಾಲ್ಲೂಕಿನಲ್ಲಿ ಈ ಹಿಂದೆ ಎರಡು ಕೆರೆಗಳ ಹೂಳೆತ್ತಲಾಗಿದೆ. ಈಗ ಜೋಜನಾ ಕೆರೆ ಹೂಳೆತ್ತಿ ಅಭಿವೃದ್ಧಿಪಡಿಸಲಾಗುವುದು. ಪರಿಸರ ಸಂರಕ್ಷಣೆ, ನಿರ್ಗತಿಕರಿಗೆ ಮಾಸಾಶನ, ಶಾಲೆಗಳಿಗೆ ಶಿಕ್ಷಕರ ಪೂರೈಕೆಯಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷಕುಮಾರ ಪಾಟೀಲ ಮಾತನಾಡಿ, ‘ಜೋಜನಾ ಕೆರೆ ಅಭಿವೃದ್ಧಿಪಡಿಸಲು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯವರು ₹14 ಲಕ್ಷದ ಯೋಜನೆ ಸಿದ್ಧಪಡಿಸಿದ್ದಾರೆ. ಈಗಿರುವ ಕೆರೆ ಇನ್ನಷ್ಟು ವಿಸ್ತರಿಸಲು ಪಂಚಾಯಿತಿಯಿಂದ 1 ಎಕರೆ ಜಮೀನು ಖರೀದಿಸಲಾಗಿದೆ' ಎಂದು ತಿಳಿಸಿದರು.

ಗುಡಪಳ್ಳಿಯ ಚಂದ್ರಶೇಖರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಗ್ರಾ.ಪಂ. ಅಧ್ಯಕ್ಷ ಘಾಳರೆಡ್ಡಿ, ತಾ.ಪಂ. ಮುಖ್ಯಾಧಿಕಾರಿ ಜಗನ್ನಾಥ ಮೂರ್ತಿ, ಜಾನಪದ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಸಂಜುಕುಮಾರ ಜುಮ್ಮಾ, ವಕೀಲರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಸಿ. ಕಸರ್ೆ, ಶಾಲಿವಾನ ಉದಗೀರೆ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry