ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಲು ಮನವಿ

Last Updated 27 ಮಾರ್ಚ್ 2018, 7:12 IST
ಅಕ್ಷರ ಗಾತ್ರ

ಹೊಸದುರ್ಗ: ಅಧಿಕಾರಿಗಳು ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ಒದಗಿಸಬೇಕು ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಸೂಚಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯ್ತಿ ಆವರಣದಲ್ಲಿ ಶನಿವಾರ ಅಂಗವಿಕಲರಿಗೆ ತಾಲ್ಲೂಕು ಪಂಚಾಯ್ತಿ ಅನುದಾನದಡಿ ವಿವಿಧ ಸಾಮಗ್ರಿ ವಿತರಿಸಿ ಅವರು ಮಾತನಾಡಿದರು.

ಅಂಗವಿಕಲರ ಕಲ್ಯಾಣಕ್ಕೆ ಸರ್ಕಾರ ಸಾಕಷ್ಟು ಶ್ರಮಿಸುತ್ತಿದೆ. ಅವರ ಸುಖೀ ಜೀವನಕ್ಕೆ ಬೇಕಿರುವ ಅಗತ್ಯ ಸೌಲಭ್ಯ ಹಾಗೂ ಪರಿಕರಗಳನ್ನು ವಿತರಿಸಲಾಗುತ್ತಿದೆ. ತಾಲ್ಲೂಕು ಪಂಚಾಯ್ತಿ ಅನುದಾನದಡಿ ಪಡೆಯುತ್ತಿರುವ ದ್ವಿಚಕ್ರ ವಾಹನ ಹಾಗೂ ಪೆಟ್ಟಿಗೆ ಅಂಗಡಿಯನ್ನು ಯಾವ ಕಾರಣಕ್ಕೂ ಪರಭಾರೆ ಮಾಡಬಾರದು ಎಂದು ಅಂಗವಿಕಲರಿಗೆ ಸಲಹೆ ನೀಡಿದರು.

ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಪ್ರೇಮಾ ರವೀಂದ್ರ ಮಾತನಾಡಿ, ಅಂಗವಿಕಲತೆ ಶಾಪವಲ್ಲ, ಅದೊಂದು ವರ ಎಂಬ ಆತ್ಮಸ್ಥೈರ್ಯದಿಂದ ಸಾಧನೆ ಮಾಡಬೇಕು. ಅಂಗವಿಕಲರು ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ವಾವಲಂಬಿ ಜೀವನ ನಡೆಸಲು ಮುಕ್ತ ಅವಕಾಶ ನೀಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯ್ತಿ ಸದಸ್ಯೆ ವಿಶಾಲಾಕ್ಷಿ ನಟರಾಜು, ತಾಲ್ಲೂಕು ಪಂಚಾಯ್ತಿ ಸಾಮಾಜಿಕ ಸ್ಥಾಯಿ ಸಮಿತಿ ಸದಸ್ಯ ಗೋವಿಂದನಾಯ್ಕ, ಇಒ ಮಹಾಂತೇಶ್‌ ಹಾಗೂ ಸದಸ್ಯರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT