ದಾವಣಗೆರೆ ವಿ.ವಿ. ಕುಲಪತಿಯಾಗಿ ಹಲಸೆ ನೇಮಕ

7

ದಾವಣಗೆರೆ ವಿ.ವಿ. ಕುಲಪತಿಯಾಗಿ ಹಲಸೆ ನೇಮಕ

Published:
Updated:
ದಾವಣಗೆರೆ ವಿ.ವಿ. ಕುಲಪತಿಯಾಗಿ ಹಲಸೆ ನೇಮಕ

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಶರಣಪ್ಪ ವೈಜಿನಾಥ್‌ ಹಲಸೆ ಅವರನ್ನು ನೇಮಕ ಮಾಡಿ ರಾಜ್ಯಪಾಲರು ಸೋಮವಾರ ಆದೇಶ ಹೊರಡಿಸಿದ್ದಾರೆ.

ನೇಮಕಾತಿ ಅಧಿಸೂಚನೆ ಪ್ರಕಟವಾಗುತ್ತಿದ್ದಂತೆ ಪ್ರಭಾರ ಕುಲಪತಿಯಾಗಿದ್ದ ಪ್ರೊ.ಬಿ.ಪಿ.ವೀರಭದ್ರಪ್ಪ ಅವರು ಹಲಸೆ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ಅಧಿಕಾರ ಸ್ವೀಕರಿಸಿದ ಬಳಿಕ ‘ಪ್ರಜಾವಾಣಿ’ ಜತೆ ಮಾತನಾಡಿದ ಕುಲಪತಿ, ‘ನನ್ನ ಅಧಿಕಾರದ ನಾಲ್ಕು ವರ್ಷಗಳ ಅವಧಿಯಲ್ಲಿ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಮೊದಲ ಆದ್ಯತೆ ನೀಡಲಾಗುವುದು’ ಎಂದರು.

‘ವಿಶ್ವವಿದ್ಯಾಲಯದಲ್ಲಿ ಕಾಯಂ ಬೋಧಕರ ಕೊರತೆ ಇರುವುದು ಗಮನಕ್ಕೆ ಬಂದಿದ್ದು, ಚುನಾವಣಾ ನೀತಿಸಂಹಿತೆ ಜಾರಿಗೂ ಮುನ್ನ ನೇಮಕಾತಿಗೆ ಪ್ರಯತ್ನಿಸಲಾಗುವುದು. ಸಾಧ್ಯವಾಗದಿದ್ದರೆ ಚುನಾವಣೆ ಮುಗಿದ ಕೂಡಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು’ ಎಂದು ಹಲಸೆ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry